ಬೆಂಗಳೂರು: ಒಂದು ವಾರ ಸ್ಥಗಿತಗೊಂಡಿದ್ದ ಐಪಿಎಲ್ 18ನೇ ಆವೃತ್ತಿಯ ಸೆಕೆಂಡ್ ಇನ್ನಿಂಗ್ಸ್ ಇಂದಿನಿಂದ ಪ್ರಾರಂಭಗೊಳ್ಳಲಿದೆ. ಈ ಆವೃತ್ತಿಯ ಚೊಚ್ಚಲ ಪಂದ್ಯವನ್ನು ಆಡಿದ್ದ ಆರ್ಸಿಬಿ ಮತ್ತು ಕೆಕೆಆರ್ ತಂಡಗಳೇ ಇಂದು ಮತ್ತೆ ಮುಖಾಮುಖಿ ಆಗುತ್ತಿವೆ.
ಈಗಾಲೇ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ ಸ್ಥಾನ ಭದ್ರಪಡಿಸಿಕೊಂಡಿದೆ. ಈ ಪಂದ್ಯವನ್ನು ಗೆದ್ದು ಪ್ಲೇಆಫ್ಗೆ ಲಗ್ಗೆ ಇಡಲು ಸಜ್ಜಾಗಿದೆ.
ಹೀಗಾಗಿ ಚಿನ್ನಸ್ವಾಮಿ ಅಂಗಳದಲ್ಲಿ ಅತಿಹೆಚ್ಚು ಜನ ಸೇರುವ ಹಿನ್ನೆಲೆ ಸ್ಟೇಡಿಯಂ ಸುತ್ತಮುತ್ತ ಭದ್ರತೆ ಪರಿಶೀಲಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ. ಸ್ಟೇಡಿಯಂ ಸುತ್ತಮುತ್ತ ಇರುವ ಬೃಹತ್ ಮರಗಳನ್ನೂ ಪರಿಶೀಲಿಸಲಾಗಿದೆ.
ಇಂದಿನ ಪಂದ್ಯ ಕಿಂಗ್ ಕೊಹ್ಲಿ ಅಭಿಮಾನಿಗಳಿಗೆ ತುಂಬಾನೇ ವಿಶೇಷ. ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಕೊಹ್ಲಿ ಮುಖ್ಯ ಆಕರ್ಷಣೆಯಾಗಿರಲಿದ್ದಾರೆ. ಇದರಿಂದ ಹೆಚ್ಚಿನ ಜನ ಸೇರುವ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಭದ್ರತೆ ಪರಿಶೀಲನೆ ನಡೆಸಲಾಗಿದೆ.