ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಐಪಿಎಲ್ 2025ರ 28ನೇ ಪಂದ್ಯ ಇಂದು ಮಧ್ಯಾಹ್ನ 3:30 ಕ್ಕೆ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಈ ಪಂದ್ಯವನ್ನು ಆರ್ಸಿಬಿ, ರಾಜಸ್ಥಾನ್ ತಂಡದ ತವರು ಮೈದಾನದಲ್ಲಿ ಆಡುತ್ತಿರುವ ಕಾರಣ, ಗೆಲುವಿನ ಫೇವರೇಟ್ ಎನಿಸಿಕೊಂಡಿದೆ.
ಈಗಾಗಲೇ ಐದು ಪಂದ್ಯಗಳನ್ನು ಆಡಿರುವ ಬೆಂಗಳೂರು ಪಡೆ 3ರಲ್ಲಿ ಗೆದ್ದು ಎರಡರಲ್ಲಿ ಸೋಲು ಕಂಡಿದೆ. ಅದರಲ್ಲೂ ಬುಧವಾರ ನಡೆದಿದ್ದ ತವರು ಮೈದಾನದಲ್ಲಿ ಡೆಲ್ಲಿ ವಿರುದ್ಧ ಸೋಲನ್ನು ಕಂಡಿರುವ ಆರ್ಸಿಬಿ ಇದೀಗ ರಾಜಸ್ಥಾನ ಮಣಿಸಿ ಮೂರನೇ ಸ್ಥಾನಕ್ಕೆರಲು ಸಿದ್ಧತೆ ನಡೆಸಿದೆ. ಇದಕ್ಕಾಗಿ ಬಲಿಷ್ಠ ತಂಡದೊಂದಿಗೆ ಮೈದಾನಕ್ಕಿಳಿಯಲು ಸಜ್ಜಾಗಿದೆ.
ಇಂದಿನ ಪಂದ್ಯಕ್ಕಾಗಿ ಆರ್ಸಿಬಿ ತಂಡ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಹೌದು, ಸತತ ಎರಡು ಪಂದ್ಯಗಳಲ್ಲಿ ಫ್ಲಾಪ್ ಆಗಿರುವ ಸ್ಟಾರ್ ಆಟಗಾರನನ್ನು ಈ ಪಂದ್ಯದಿಂದ ಹೊರಗಿಡುವ ಸಾಧ್ಯತೆ ದಟ್ಟವಾಗಿದೆ. ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿರುವ ಲಿವಿಂಗ್ಸ್ಟೋನ್ ಮುಂಬೈ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಶೂನ್ಯಕ್ಕೆ ಪೆವಿಲಿಯನ್ ಸೇರಿ ನಿರಾಸೆ ಮೂಡಿಸಿದ್ದರು. ಇದೀಗ ಮುಂದಿನ ಪಂದ್ಯಕ್ಕೆ ಲಿವಿಂಗ್ಸ್ಟೋನ್ ಅವರನ್ನು ಹೊರಗಿಡುವ ಸಾಧ್ಯತೆ ಇದೆ. ಇವರ ಸ್ಥಾನಕ್ಕೆ ಜೇಕಬ್ ಬೆಥೆಲ್ ಅವರನ್ನು ಆಡಿಸುವು ಬಗ್ಗೆ ಚಿಂತಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.



