HomeSports NewsIPL 2025: KKR ವಿರುದ್ಧ RCBಗೆ ಭರ್ಜರಿ ಗೆಲುವು: ಮೊದಲ ಪಂದ್ಯದಲ್ಲೇ 5 ಭರ್ಜರಿ ದಾಖಲೆ...

IPL 2025: KKR ವಿರುದ್ಧ RCBಗೆ ಭರ್ಜರಿ ಗೆಲುವು: ಮೊದಲ ಪಂದ್ಯದಲ್ಲೇ 5 ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ!

For Dai;y Updates Join Our whatsapp Group

Spread the love

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಶನಿವಾರ ನಡೆದ ಕೋಲ್ಕತ್ತಾ ಹಾಗೂ RCB ವಿರುದ್ಧದ IPL 2025ರ ಮೊದಲ ಪಂದ್ಯದಲ್ಲಿ ಆರ್ ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿ ಅವರು, 5 ವಿಶೇಷ ದಾಖಲೆ ಬರೆದಿದ್ದಾರೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 174 ರನ್ ಕಲೆಹಾಕಿತು. 175 ರನ್​ಗಳ ಗುರಿಯನ್ನು ಬೆನ್ನತ್ತಿದ ಆರ್​​ಸಿಬಿ ಪರ ಫಿಲ್ ಸಾಲ್ಟ್ (56) ಹಾಗೂ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದರು. ಅದರಲ್ಲೂ 36 ಎಸೆತಗಳನ್ನು ಎದುರಿಸಿದ ಕಿಂಗ್ ಕೊಹ್ಲಿ 3 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 59 ರನ್ ಬಾರಿಸಿದರು. ಈ 59 ರನ್​ಗಳೊಂದಿಗೆ ಕೊಹ್ಲಿ ಹಲವು ದಾಖಲೆ ಬರೆದರು.

* 1000 ರನ್ ಸರದಾರ: ಐಪಿಎಲ್ ಇತಿಹಾಸದಲ್ಲಿ 4 ತಂಡಗಳ ವಿರುದ್ಧ 1000+ ರನ್​ ಕಲೆಹಾಕಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಕೊಹ್ಲಿ, ಚೆನ್ನೈ ಸೂಪರ್ ಕಿಂಗ್ಸ್ (1053), ಡೆಲ್ಲಿ ಕ್ಯಾಪಿಟಲ್ಸ್ (1057) ಮತ್ತು ಪಂಜಾಬ್ ಕಿಂಗ್ಸ್ (1030) ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ (1021) ವಿರುದ್ಧ ಈ ಸಾಧನೆ ಮಾಡಿದ್ದಾರೆ.

* ಅತ್ಯಧಿಕ ಅರ್ಧಶತಕ: ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಅರ್ಧಶತಕ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಕೊಹ್ಲಿ 2ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಡೇವಿಡ್ ವಾರ್ನರ್ (66) ಮೊದಲ ಸ್ಥಾನದಲ್ಲಿದ್ದರೆ, ಇದೀಗ 64 ಅರ್ಧಶತಕಗಳೊಂದಿಗೆ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

* ಕೆಕೆಆರ್ ವಿರುದ್ಧ ದರ್ಬಾರ್: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಕೆಕೆಆರ್ ವಿರುದ್ಧ 1000 ರನ್ ಕಲೆಹಾಕಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿಗೂ ಮುನ್ನ ರೋಹಿತ್ ಶರ್ಮಾ (1070) ಮತ್ತು ಡೇವಿಡ್ ವಾರ್ನರ್ (1093) ಮಾತ್ರ ಈ ಸಾಧನೆ ಮಾಡಿದ್ದರು.

* 400 ಟಿ20 ಪಂದ್ಯಗಳು: ಟಿ20 ಕ್ರಿಕೆಟ್​ನಲ್ಲಿ 400 ಪಂದ್ಯಗಳನ್ನಾಡಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಕೊಹ್ಲಿಗೂ ಮುನ್ನ ರೋಹಿತ್ ಶರ್ಮಾ (448) ಹಾಗೂ ದಿನೇಶ್ ಕಾರ್ತಿಕ್ (412) ಮಾತ್ರ ನಾನ್ನೂರು ಪಂದ್ಯಗಳನ್ನಾಡಿದ್ದರು.

* ನಾನೂರನೇ ಪಂದ್ಯದಲ್ಲಿ ಮಿಂಚಿಂಗ್: 400ನೇ ಟಿ20 ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!