ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಇದೀಗ ಮತ್ತಷ್ಟು ಚುರುಕುಗೊಂಡಿದೆ. ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ವಿಶೇಷ ತನಿಖಾ ತಂಡಕ್ಕೆ (SIT) ನೂತನ ಮುಖ್ಯಸ್ಥರ ನೇಮಕವಾಗಿದ್ದು, ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ಸೌಜನ್ಯ ಅವರ ಕುಟುಂಬದವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಸೌಜನ್ಯ ಪ್ರಕರಣದ ಎಸ್ಐಟಿ ನೂತನ ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಠೋಡ್ ನೇಮಕಗೊಂಡಿದ್ದಾರೆ. ನವೆಂಬರ್ 2ರಿಂದ ಅವರು ತನಿಖೆಯ ಸಾರಥ್ಯ ವಹಿಸಿಕೊಳ್ಳಲಿದ್ದಾರೆ. ಇದರ ಬೆನ್ನಲ್ಲೇ ಸೌಜನ್ಯ ಅವರ ತಾಯಿ ಕುಸುಮಾವತಿ ಹಾಗೂ ಮಾವ ವಿಠಲ ಗೌಡ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದ್ದಾರೆ.
ಇಂದು ಎಸ್ಐಟಿ ಕಚೇರಿಗೆ ನೂತನ ಮುಖ್ಯಸ್ಥರ ಭೇಟಿ
ಚೇತನ್ ಸಿಂಗ್ ರಾಠೋಡ್ ಅವರು ಇಂದು ಬೆಳಿಗ್ಗೆ ಮಂಗಳೂರಿನ ಎಸ್ಐಟಿ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ ಸೌಜನ್ಯ ಅವರ ತಾಯಿ ಕುಸುಮಾವತಿ ಮತ್ತು ಮಾವ ವಿಠಲ ಗೌಡ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಸೌಜನ್ಯ ಪ್ರಕರಣದ ಮರುತನಿಖೆ ಮತ್ತೆ ವೇಗ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನೂತನ ಎಸ್ಐಟಿ ಮುಖ್ಯಸ್ಥರ ಮುಂದಿನ ನಡೆ ಕುತೂಹಲ ಮೂಡಿಸಿದೆ. ಕುಟುಂಬದವರ ವಿಚಾರಣೆಯಿಂದ ತನಿಖೆಗೆ ಯಾವ ರೀತಿಯ ಹೊಸ ಮಾಹಿತಿ ಲಭ್ಯವಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.










