ಕೋಲ್ಕತ್ತಾ: ಕರ್ನಾಟಕದ ಬಳಿಕ ಇದೀಗ ಪಶ್ಚಿಮ ಬಂಗಾಳದಲ್ಲೂ ಬಿಸ್ಲೆರಿ (Bisleri) ಕಂಪನಿಗೆ ಸಂಕಷ್ಟ ಎದುರಾಗಿದೆ.
ಕಂಪನಿಯ ನೀರಿನ ಮಾದರಿಯಲ್ಲಿ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಪ್ರಯೋಗಾಲಯದ ಪರೀಕ್ಷೆಯಲ್ಲಿ ನೀರು ಅಸುರಕ್ಷಿತ ಎಂದು ದೃಢಪಟ್ಟಿದೆ.
ಜಲಪೈಗುರಿ ಜಿಲ್ಲೆಯ ತೆಲಿಪಾರಾ ಗ್ರಾಮದ ಬಿಸ್ಲೆರಿ ಘಟಕದಿಂದ ಸಂಗ್ರಹಿಸಲಾಗಿದ್ದ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ನೀರಿನಲ್ಲಿ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಇರುವುದು ಪತ್ತೆಯಾಗಿದೆ. ಸಾಮಾನ್ಯವಾಗಿ ಒಳಚರಂಡಿ ಸೋರಿಕೆ, ಹಾನಿಗೊಳಗಾದ ಪೈಪ್ಗಳು ಸೇರಿದಂತೆ ವಿವಿಧ ಕಾರಣಗಳಿಂದ ಇಂತಹ ಬ್ಯಾಕ್ಟೀರಿಯಾಗಳು ನೀರನ್ನು ಸೇರುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಬಿಸ್ಲೆರಿ ಇಂಟರ್ನ್ಯಾಷನಲ್ ಕಂಪನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಅನುಮತಿ ನೀಡಿದೆ.
2026ರ ಆಗಸ್ಟ್ 12ರಂದು ಸಂಬಂಧಿತ ಬ್ಯಾಚ್ನ ನೀರಿನ ಮಾರಾಟಕ್ಕೆ ಪ್ರಾಧಿಕಾರ ನಿರ್ಬಂಧ ವಿಧಿಸಿತ್ತು. ಇದೀಗ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ ವಿಚಾರಣೆ ಹಾಗೂ ಕಾನೂನು ಕ್ರಮಕ್ಕೆ ಅನುಮೋದನೆ ನೀಡಲಾಗಿದೆ.
ಇನ್ನು, ಗೋವಾದಲ್ಲಿರುವ ಬಿಸ್ಲೆರಿ ಘಟಕದ ನೀರಿನ ಮಾದರಿಯೂ ಈ ಹಿಂದೆ ಪರೀಕ್ಷೆಯಲ್ಲಿ ವಿಫಲವಾಗಿತ್ತು. ಆದರೆ, ತನ್ನ ಉತ್ಪನ್ನಗಳು ಬಳಕೆಗೆ ಸುರಕ್ಷಿತವಾಗಿವೆ ಎಂದು ಕಂಪನಿ ಈ ಹಿಂದೆ ಸ್ಪಷ್ಟನೆ ನೀಡಿತ್ತು.









