ಬೆಂಗಳೂರು: ಖಾಸಗಿ ಕನ್ನಡ ವಾಹಿನಿಯ ರಿಯಾಲಿಟಿ ಶೋ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ಸೀಸನ್ 2 ಮೂಲಕ ಖ್ಯಾತಿ ಪಡೆದಿದ್ದ ಪದ್ಮನಾಭ ಕೆ.ಎಂ (ಪದ್ದು ಗೌಡ) ಅವರು ಬ್ರೈನ್ ಟ್ಯೂಮರ್‌ನಿಂದ ಮೃತಪಟ್ಟಿದ್ದಾರೆ.
ಮಾಡೆಲ್ ಹಾಗೂ ನಿರೂಪಕರಾಗಿಯೂ ಕಾರ್ಯನಿರ್ವಹಿಸಿದ್ದ 44 ವರ್ಷದ ಪದ್ದು ಗೌಡ ಅವರು ಬೆಂಗಳೂರಿನ ಯಲಹಂಕದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ದೀರ್ಘಕಾಲದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ರಿಯಾಲಿಟಿ ಶೋ ಮೂಲಕ ಗಮನ ಸೆಳೆದಿದ್ದ ಅವರು ನಂತರ ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು. ಅವರ ನಿಧನಕ್ಕೆ ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪದ್ಮನಾಭ ಗೌಡ ಅವರು ಪತ್ನಿ ಅಶ್ವಿನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ.



