HomeBelgaumಗಾಂಧಿ ಕನಸನ್ನು ನನಸಾಗಿಸುವುದು ಇಂದಿನ ಅಗತ್ಯ: ಸಿಎಂ ಸಿದ್ದರಾಮಯ್ಯ

ಗಾಂಧಿ ಕನಸನ್ನು ನನಸಾಗಿಸುವುದು ಇಂದಿನ ಅಗತ್ಯ: ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ರಾಮ ಭಕ್ತರಾಗಿದ್ದ, ಶುದ್ಧ ಆತ್ಮದ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮ ಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರವು ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸ್ಮರಣಾರ್ಥ ರಾಜ್ಯ ಕಾಂಗ್ರೆಸ್ ವತಿಯಿಂದ ಮಂಗಳವಾರ ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ ಹಾಗೂ ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರವು ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ದ್ವೇಷಿಯೂ ಆಗಿದೆ. ನಾವು ಮಹಾತ್ಮ ಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನವನ್ನು ಮುನ್ನಡೆಸುತ್ತೇವೆ ಎಂದು ಹೇಳಿದರು.

ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮ ಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು. 1924ರ ಕಾಂಗ್ರೆಸ್ ಅಧಿವೇಶನದ ನಿರ್ಣಯಗಳು, ಕೋಲ್ಕತ್ತಾ ಒಪ್ಪಂದ ಮತ್ತು ನೇಯ್ಗೆಯ ಮತಾಧಿಕಾರ, ಸರೋಜಿನಿ ನಾಯ್ಡು ಅವರ ವಿದೇಶಾಂಗ ಸೇವೆ, ಅಕಾಲಿಗಳಿಗೆ ಅಭಿನಂದನೆ, ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳು, ಬರ್ಮಾದ ಜನರಿಗೆ ಸಹಾನುಭೂತಿ, ಕೋಹತ್ ಹಾಗೂ ಗುಲಬರ್ಗಾ ಗಲಭೆಗಳು, ಅಸ್ಪೃಶ್ಯತೆ ನಿವಾರಣೆ, ಅಧಿವೇಶನದ ಲೆಕ್ಕಪರಿಶೋಧನೆ ಸೇರಿದಂತೆ ಐತಿಹಾಸಿಕ ಮಾಹಿತಿಗಳು ಹಾಗೂ ಛಾಯಾಚಿತ್ರಗಳನ್ನು `ಗಾಂಧಿ ಭಾರತ ಮರು ನಿರ್ಮಾಣ’ ಹಾಗೂ `ರಿಕ್ಲೇಮಿಂಗ್ ಗಾಂಧಿ ಭಾರತ್’ ಪುಸ್ತಕಗಳು ಒಳಗೊಂಡಿವೆ ಎಂದರು.

ರಾಷ್ಟ್ರದ ಇಂದಿನ ಅಗತ್ಯವೆಂದರೆ, ಗಾಂಧಿ ಆದರ್ಶಗಳನ್ನು ಅನುಸರಿಸುವುದು, ಗಾಂಧಿ ತತ್ವಗಳನ್ನು ಅಳವಡಿಸಿಕೊಳ್ಳುವುದು, ಗಾಂಧಿ ಕನಸನ್ನು ನನಸಾಗಿಸುವುದು ಎಂದು ಸಿದ್ದರಾಮಯ್ಯ ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಂಸದೆ ಪ್ರಿಯಾಂಕಾ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್‌ಸಿಂಗ್ ಸುರ್ಜೇವಾಲಾ, ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಎಚ್.ಕೆ. ಪಾಟೀಲ, ಡಾ. ಜಿ. ಪರಮೇಶ್ವರ, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಇದೇ ಕಾರ್ಯಕ್ರಮದಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು, ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡಿರುವ `ಗಾಂಧಿ ಭಾರತ ಮರು ನಿರ್ಮಾಣ’ ಹಾಗೂ ರಿಕ್ಲೇಮಿಂಗ್ ಗಾಂಧಿ ಭಾರತ್ ಎನ್ನುವ ಕನ್ನಡ ಹಾಗೂ ಇಂಗ್ಲಿಷ್ ಪುಸ್ತಕಗಳನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!