ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಸುಮಲತಾ ರಾಜಕೀಯ ಭವಿಷ್ಯ ಅತಂತ್ರವಾಗಿದೆ ಎಂದು ಹೇಳಲಾಗಿತ್ತು. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ಆ ಕ್ಷೇತ್ರ ಜೆಡಿಎಸ್ ಪಾಲಾಗಿತ್ತು. ಸುಮಲತಾ ಬಿಜೆಪಿ ಸೇರಿದ್ದರಿಂದ ಮಂಡ್ಯ ಟಿಕೆಟ್ ಕೈತಪ್ಪಿತ್ತು. ಇದೀಗ ರೆಬಲ್ ಲೇಡಿ ಮಂಡ್ಯಕ್ಕೆ ರೀ ಎಂಟ್ರಿ ಕೊಟ್ಟಿದ್ದಾರೆ.
Advertisement
ಕಳೆದ ಲೋಕಸಭಾ ಚುನಾವಣೆ ನಂತ್ರ ಮಂಡ್ಯ ರಾಜಕಾರಣದಿಂದ ಅಂತರ ಕಾಯ್ದುಕೊಂಡಿದ್ದ ಸುಮಲತಾ, ಮಂಡ್ಯ ನಗರದ ಬಂದಿಗೌಡ ಬಡಾವಣೆಯಲ್ಲಿ ಹೊಸ ಮನೆ ಬಾಡಿಗೆ ಪಡೆದಿದ್ದಾರೆ. ಕೆಲ ದಿನಗಳ ಹಿಂದೆಯೇ ನೂತನ ಬಾಡಿಗೆ ಮನೆಯಲ್ಲಿ ಹಾಲು ಉಕ್ಕಿಸುವ ಕಾರ್ಯ ನೆರವೇರಿದೆ.
ಕಳೆದ ಲೋಕಸಭಾ ಚುನಾವಣೆ ನಂತ್ರ ಮಂಡ್ಯ ರಾಜಕಾರಣದಿಂದ ಅಂತರ ಕಾಯ್ದುಕೊಂಡಿದ್ದರು ಸುಮಲತಾ. ಜನವರಿ ನಂತರ ಮಂಡ್ಯ ರಾಜಕಾರಣದಲ್ಲಿ ಸಕ್ರಿಯೆಗೊಳ್ಳುವ ಬಗ್ಗೆ ಕಳೆದ ನವಂಬರ್ ನಲ್ಲಿ ಹೇಳಿಕೆ ನೀಡಿದ್ದರು.