BJP ಪಕ್ಷದಿಂದ ರೆಬಲ್ ಶಾಸಕರಾದ ಶಿವರಾಮ್ ಹೆಬ್ಬಾರ್, ಎಸ್.ಟಿ ಸೋಮಶೇಖರ್ ಉಚ್ಛಾಟನೆ!

0
Spread the love

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಶಾಸಕ ಎಸ್ಟಿ ಸೋಮಶೇಖರ್ಹಾಗೂ ಶಾಸಕ ಶಿವರಾಂ ಹೆಬ್ಬಾರ್ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ.

Advertisement

ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಮೊದಲು ಇಬ್ಬರೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದರು. 2019ರಲ್ಲಿ ಇಬ್ಬರೂ ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.

2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಇಬ್ಬರೂ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here