ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಾಜಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಹೊಯ್ಸಳ ಡ್ರೀಮ್ಸ್ ಅಪಾರ್ಟ್‌ಮೆಂಟ್‌ನಲ್ಲಿರುವ ಅವರ ನಿವಾಸದಲ್ಲೇ ಇಡಿ ಅಧಿಕಾರಿಗಳು ಶಿವಶಂಕರಪ್ಪ ಅವರನ್ನು ವಶಕ್ಕೆ ಪಡೆದಿದ್ದು, ಅವರ ಮೊಬೈಲ್ ಫೋನ್ ಅನ್ನೂ ವಶಪಡಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ.
ಬೆಳಗ್ಗೆ 6 ಗಂಟೆ ಸುಮಾರಿಗೆ ಇಡಿ ಅಧಿಕಾರಿಗಳು ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಶಿವಶಂಕರಪ್ಪ ಅವರ ಪತ್ನಿ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದ್ದು, ಇದರಿಂದಾಗಿ ಅಧಿಕಾರಿಗಳ ತಂಡ ಅವರನ್ನು ಹುಡುಕಿಕೊಂಡು ದೇವಸ್ಥಾನದ ಬಳಿಗೆ ತೆರಳಿತ್ತು. ಆದರೆ ಅಷ್ಟರಲ್ಲಾಗಲೇ ಶಿವಶಂಕರಪ್ಪ ಪತ್ನಿ ಮನೆಗೆ ವಾಪಸ್ ಬಂದಿದ್ದರು ಎಂದು ತಿಳಿದುಬಂದಿದೆ.



