ಬೆಂಗಳೂರು: ರಾಜ್ಯದ ವಿವಿಧ ನಿಗಮ-ಮಂಡಳಿಗಳಲ್ಲಿ ಖಾಲಿ ಇರುವ ಅಧ್ಯಕ್ಷ ಸ್ಥಾನಗಳು ಹಾಗೂ ಸರ್ಕಾರದ ಪ್ರಮುಖ ಆಯಕಟ್ಟಿನ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನೇಮಕಾತಿ ಪಟ್ಟಿಯನ್ನು ಪ್ರಕಟಿಸಿದ್ದು, 12 ಶಾಸಕರು ಹಾಗೂ ಮೂವರು ಪಕ್ಷದ ಕಾರ್ಯಕರ್ತರಿಗೆ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿದೆ.
ಇದರ ಜತೆಗೆ ಸರ್ಕಾರದ ಪ್ರಮುಖ ಹುದ್ದೆಗಳಿಗೂ ನೇಮಕಾತಿ ಮಾಡಲಾಗಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರನ್ನು ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದ್ದು, ಮಾಜಿ ಸಚಿವ ತನ್ವೀರ್ ಸೇಠ್ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜವಾಬ್ದಾರಿ ನೀಡಲಾಗಿದೆ. ಮಂಜುನಾಥ್ ಭಂಡಾರಿ ಅವರನ್ನು ವಿಧಾನ ಪರಿಷತ್ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.
ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಿಗೆ ವಿವಿಧ ಹುದ್ದೆಗಳನ್ನು ಹಂಚಿಕೆ ಮಾಡುವ ಮೂಲಕ ನಿಗಮ-ಮಂಡಳಿಗಳ ಆಡಳಿತಕ್ಕೆ ವೇಗ ನೀಡಲು ಸರ್ಕಾರ ಮುಂದಾಗಿದೆ.
ಯಾರಿಗೆ ಯಾವ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ?
ರಾಜ್ಯ ಸರ್ಕಾರ ಪ್ರಕಟಿಸಿರುವ ನೇಮಕಾತಿ ಪಟ್ಟಿಯಲ್ಲಿರುವ ಪ್ರಮುಖ ಹೆಸರುಗಳು ಹಾಗೂ ಅವರಿಗೆ ವಹಿಸಿರುವ ಜವಾಬ್ದಾರಿಗಳ ವಿವರ ಇಲ್ಲಿದೆ.
- ಬಿ. ಶಿವಣ್ಣ – ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷ
- ಕೆ. ಷಡಕ್ಷರಿ – ರಾಜ್ಯ ಗಣಿ ನಿಗಮ ಅಧ್ಯಕ್ಷ
- ಪಿ.ಎಂ. ಅಶೋಕ್ – ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷ
- ಎ.ಆರ್. ಕೃಷ್ಣಮೂರ್ತಿ – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಅಧ್ಯಕ್ಷ
- ಹಂಪನಗೌಡ ಬಾದರ್ಲಿ – ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ
- ಡಿ.ಜಿ. ಶಾಂತನಗೌಡ – ತ್ಯಾಜ್ಯ ನಿರ್ವಹಣಾ ನಿಗಮ ಅಧ್ಯಕ್ಷ
- ಜಿ.ಎಚ್. ಶ್ರೀನಿವಾಸ್ – ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಅಧ್ಯಕ್ಷ
- ಮಹಾಂತೇಶ್ ಕೌಜಲಗಿ – ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (KRDCL) ಅಧ್ಯಕ್ಷ
- ಎಸ್.ಎನ್. ಸುಬ್ಬಾರೆಡ್ಡಿ – ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) ಅಧ್ಯಕ್ಷ
- ಎನ್.ಎಚ್. ಕೋನರಡ್ಡಿ – ಕೃಷಿ ಬೆಲೆ ಆಯೋಗ ಅಧ್ಯಕ್ಷ
- ಬಸನಗೌಡ ದದ್ದಲ್ – ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷ
- ಅಲ್ಲಂಪ್ರಭು ಪಾಟೀಲ್ – ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (KSSIDC) ಅಧ್ಯಕ್ಷ
- ಶ್ಯಾಮ್ ನಾಟೇಕರ್ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ
- ಹೆಚ್.ಸಿ. ಲಲಿತ್ ರಾಘವ್ – ಸರ್ಕಾರಿ ವಿದ್ಯುತ್ ಕಾರ್ಖಾನೆ (NGEF/GEF) ಅಧ್ಯಕ್ಷ
- ಸುಭಾಷ್ ರಾಥೋಡ್ – ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ
ಈ ನೇಮಕಾತಿಗಳ ಮೂಲಕ ನಿಗಮ-ಮಂಡಳಿಗಳಲ್ಲಿ ಖಾಲಿ ಇದ್ದ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರಿಗೆ ಸರ್ಕಾರದಲ್ಲಿ ಜವಾಬ್ದಾರಿ ನೀಡಲಾಗಿದೆ.









