540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ: ಈಶ್ವರ್ ಖಂಡ್ರೆ

0
Spread the love

ಬೆಂಗಳೂರು:- 540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಾಡಾನೆ ದಾಳಿ, ಹುಲಿ ದಾಳಿ ಸೇರಿದಂತೆ ವನ್ಯಜೀವಿ ದಾಳಿಯಿಂದ ಮೃತಪಟ್ಟವರಿಗೆ ಪ್ರಸ್ತುತ 20 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಹಾವು ಕಚ್ಚಿ ಮೃತಪಟ್ಟವರಿಗೆ ಕೃಷಿ ಇಲಾಖೆಯ ವತಿಯಿಂದ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತಿದೆ.

Advertisement

ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಸರ್ಕಾರ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕವಾಗಿ ಆನೆ ಕಾರ್ಯಪಡೆಯನ್ನು ಮಂಜೂರು ಮಾಡಲು ಸೂಚಿಸಲಾಗಿದ್ದು, 2-3 ದಿನಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು. ಈ ಪಡೆಯಲ್ಲಿ 32 ಸಿಬ್ಬಂದಿ ಇರುತ್ತಾರೆ. ಅವರು ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯದ ಜೊತೆಗೆ ಪುಂಡಾನೆ ಸೆರೆ ಕಾರ್ಯಾಚರಣೆಯಲ್ಲೂ ಸಹಕರಿಸಲಿದ್ದಾರೆ ಎಂದರು

ಆನೆಪಥ (ಕಾರಿಡಾರ್) ಮತ್ತು ಆವಾಸಸ್ಥಾನ ಸಂರಕ್ಷಣೆಗಾಗಿ ಅಧ್ಯಯನ ನಡೆಸಲು ಭಾರತೀಯ ವಿಜ್ಞಾನ ಮಂದಿರ (ಐಐಎಸ್‌ಸಿ) ದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಪ್ರೊ. ಆರ್.ಸುಕುಮಾರ್ ಅವರ ತಂಡ ಅಧ್ಯಯನ ಆರಂಭಿಸಿದೆ ಎಂದು ತಿಳಿಸಿದರು. ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ವಿಷ ಪ್ರಾಶನದಿಂದ ಮೃತಪಟ್ಟಿದ್ದು, ಅತ್ಯಂತ ನೋವಿನ ಸಂಗತಿ. ಈಗಾಗಲೇ ತಪ್ಪಿತಸ್ಥರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.


Spread the love

LEAVE A REPLY

Please enter your comment!
Please enter your name here