ಬೆಂಗಳೂರು:- ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಸೆಪ್ಟೆಂಬರ್ 3ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯಾಗಲಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ. ಎಚ್ಎಎಲ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.