ನಟ-ನಟಿಯರು ಯಾರದ್ದಾದರೂ ಜೊತೆ ಸುತ್ತಾಟ ನಡೆಸಿದರೆ ಸಾಕು, ಡೇಟಿಂಗ್ ವಿಚಾರ ಹುಟ್ಟಿಕೊಳ್ಳುತ್ತದೆ. ಪ್ರೀತಿ-ಪ್ರೇಮದ ರೆಕ್ಕೆ ಪಡೆದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತದೆ. ಈ ಪೈಕಿ ಕೆಲವು ನಿಜವಾದರೆ ಇನ್ನೂ ಕೆಲವು ಸುಳ್ಳಾಗಿದೆ. ಇದೀಗ ಕೀರ್ತಿ ಸುರೇಶ್ ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನಟಿಯ ಮದುವೆ ಮ್ಯಾಟರ್ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ.
ಮೂಲಗಳ ಪ್ರಕಾರ, ಕುಟುಂಬಸ್ಥರು ನೋಡಿದ ಹುಡುಗನ ಜೊತೆ ಕೀರ್ತಿ ಮದುವೆಯಾಗಲು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಇದೇ ಡಿಸೆಂಬರ್‌ನಲ್ಲಿ ಗೋವಾದಲ್ಲಿ ಕೀರ್ತಿ ಸುರೇಶ್ ಮದುವೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ವರ ಕೂಡ ನಟಿಯ ಸಂಬಂಧಿ ಎಂದು ಹೇಳಲಾಗುತ್ತಿದೆ. ಇದು ವಿಚಾರ ಅದೆಷ್ಟರ ಮಟ್ಟಿಗೆ ನಿಜ ಎಂಬುದನ್ನು ಕಾದುನೋಡಬೇಕಿದೆ.
ಕೀರ್ತಿ ಸುರೇಶ್ ಅವರ ಹೆಸರು ಅನೇಕರೊಂದಿಗೆ ತಳುಕು ಹಾಕಿಕೊಂಡಿದೆ. ಈ ಹಿಂದೆ ಸಂಗೀತ ನಿರ್ದೇಶಕ ಅನಿರುದ್ಧ ರವಿಚಂದರ್ ಜೊತೆ ಕೂಡ ತಳುಕು ಹಾಕಿಕೊಂಡಿತ್ತು. ಆ ನಂತರ ನಟಿ ಇದು ಸುಳ್ಳು ಸುದ್ದಿ. ನಾವಿಬ್ಬರೂ ಫ್ರೆಂಡ್ಸ್ ಎಂದು ಪ್ರತಿಕ್ರಿಯೆ ನೀಡಿದರು. ಹಾಗಾಗಿ ಈ ಬಾರಿ ಹರಿದಾಡುತ್ತಿರುವ ಮದುವೆ ವಿಚಾರಕ್ಕೆ ನಟಿ ಏನು ಹೇಳ್ತಾರೋ? ಕಾಯಬೇಕಿದೆ. ಇನ್ನೂ `ಬೇಬಿ ಜಾನ್’ ಸಿನಿಮಾ ಮೂಲಕ ನಟಿ ಕೀರ್ತಿ ಸುರೇಶ್ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ.