ಬೆಂಗಳೂರು: ನಿನ್ನೆಯಷ್ಟೆ ಜಾಮೀನಿನ ಷರತ್ತುಗಳನ್ನು ಪೂರೈಸದ ಕಾರಣ ರಜತ್ ಕಿಶನ್ ರನ್ನು ಪೊಲೀಸರು ಮತ್ತೆ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ರಜತ್‌ಗೆ ಏಪ್ರಿಲ್ 29ರ ವರೆಗೆ ನ್ಯಾಯಾಲಯ ಬಂಧನ ವಿಧಿಸಿತ್ತು. ಇದೀಗ ನಗರದ 24ನೇ ಎಸಿಜೆಎಂ ಕೋರ್ಟ್ ಜಾಮೀನು ಮಂಜೂರು ಮಾಡಿ ರಜತ್ ಕಿಶನ್ಗೆ ರಿಲೀಫ್ ನೀಡಿದೆ.
ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರನ್ನು ಪೊಲೀಸರು ನಿನ್ನೆ ಬಂಧಿಸಿ ಕೋರ್ಟ್ಗೆ ಹಾಜರು ಪಡಿಸಿದ್ದರು. ಈ ವೇಳೆ ಕೋರ್ಟ್ ರಜತ್ ಕಿಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದರ ಬೆನ್ನಲ್ಲೇ ರಜತ್ ಕಿಶನ್ ಅವರಿಗೆ ಇಂದು ಜಾಮೀನು ಮಂಜೂರು ಮಾಡಲಾಗಿದೆ.
ಈ ರೀಲ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್‌ಗೆ ಮಾತ್ರ ವಾರೆಂಟ್ ಇತ್ತು. ವಿನಯ್‌ಗೌಡಗೆ ವಾರೆಂಟ್ ಇರಲಿಲ್ಲ. ಹೀಗಾಗಿ ವಿನಯ್ ಗೌಡ ಅವರಿಗೆ ನಿನ್ನೆಯೇ ರಿಲೀಫ್ ಸಿಕ್ಕಿತ್ತು. ರಜತ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆದರೆ ರಜತ್ ಪರ ವಕೀಲರು ಕೋರ್ಟ್ಗೆ ನಿನ್ನೆಯೇ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ಮಾಡಿ ಆದೇಶ ಇಂದಿಗೆ ಕಾಯ್ದಿರಿಸಿತ್ತು. ಅದರಂತೆ 24ನೇ ಎಸಿಜೆಎಂ ನ್ಯಾಯಾಲಯ ಜಾಮೀನು ನೀಡಿದೆ.