ವಿಜಯಸಾಕ್ಷಿ ಸುದ್ದಿ, ಗದಗ: ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಗದಗ ಜಿಲ್ಲಾ ವಿಶ್ವಕರ್ಮ ಸಮಾಜದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕಲಿಕಾ ಸಾಮಗ್ರಿಗಳ ವಿತರಣೆ, ವಿಶ್ವಕರ್ಮ ನೌಕರಶ್ರೀ, ವಿಶ್ವಕರ್ಮ ಸಾಧಕಶ್ರೀ ಪ್ರಶಸ್ತಿ ಪ್ರದಾನ, ಸಂಘದ ನಿವೃತ್ತ ಸದಸ್ಯರಿಗೆ ಸನ್ಮಾನ ಹಾಗೂ ಶ್ರೀ ವಿಶ್ವಕರ್ಮ ಭವನ, ವಿದ್ಯಾರ್ಥಿ ವಸತಿ ನಿಲಯಗಳ ಕಟ್ಟಡಕ್ಕೆ ದೇಣಿಗೆ ನೀಡಿದ ಮಹಾದಾನಿಗಳ ಫೋಟೋ ಅನಾವರಣ ಕಾರ್ಯಕ್ರಮವನ್ನು ಜೂನ್ 15ರ ಬೆಳಿಗ್ಗೆ 9.30ಕ್ಕೆ ಶ್ರೀ ವಿಶ್ವಕರ್ಮ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ರಾಜಗೋಪಾಲ ಡಿ.ಕಡ್ಲಿಕೊಪ್ಪ ತಿಳಿಸಿದ್ದಾರೆ.
2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. 75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಹಾಗೂ ಪಿಯುಸಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಶೇ. 70ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಹರಿರುತ್ತಾರೆ. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಮೊದಲ ಮೂರು ಸ್ಥಾನ ಗಳಿಸಿದವರಿಗೆ ಪ್ರತ್ಯೇಕ ನಗದು ಪುರಸ್ಕಾರ ಮತ್ತು ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದೊಂದಿಗೆ ಸನ್ಮಾನಿಸಲಾಗುವುದು.
ವಿಶ್ವಕರ್ಮ ನೌಕರಶ್ರೀ ಪ್ರಶಸ್ತಿಯನ್ನು ಸಂಘದ ಹಿರಿಯ ಸದಸ್ಯರಿಗೆ ತಾಲೂಕಾವಾರು ನೀಡಲಾಗುವುದು. ಪಂಚ ಕುಲಕಸಬುಗಳಲ್ಲಿ ವಿಶೇಷ ಸಾಧನೆ ಮಾಡಿದ ವಿಶ್ವಕರ್ಮ ಸಮಾಜದ ಬಾಂಧವರಿಗೆ ತಾಲೂಕಾವಾರು ಒಬ್ಬರಿಗೆ ವಿಶ್ವಕರ್ಮ ಸಾಧಕಶ್ರೀ ಪ್ರಶಸ್ತಿ ನೀಡಲಾಗುವುದು. 2024 ಜುಲೈದಿಂದ ಜೂನ್ 2025ರವರೆಗೆ ನಿವೃತ್ತಿ ಹೊಂದುವ ಸಂಘದ ಸದಸ್ಯ ದಂಪತಿಗಳಿಗೆ ಗೌರವ ಪೂರ್ವಕ ಸನ್ಮಾನ ಮಾಡಲಾಗುವುದು ಎಂದು ರಾಜಗೋಪಾಲ ಡಿ.ಕಡ್ಲಿಕೊಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ವಿಳಾಸ ದೃಢೀಕರಣವನ್ನು ಪ್ರತಿಭಾ ಪುರಸ್ಕಾರ ಆಯ್ಕೆ ಸಮಿತಿ ಸದಸ್ಯರು ತೀರ್ಮಾನಿಸುತ್ತಾರೆ. ಅರ್ಹ ವಿದ್ಯಾರ್ಥಿಗಳು ದಿನಾಂಕ 10-06-2025ರೊಳಗೆ ಸಂಘವು ನಿಗದಿಗೊಳಿಸಿದ ಗೂಗಲ್ ಫಾರ್ಮ್ನಲ್ಲಿ ಅರ್ಜಿ ಸಲ್ಲಿಸಬೇಕು. ಗೂಗಲ್ ಫಾರ್ಮ್ ಲಿಂಕ್ನ್ನು ಆಯ್ಕೆ ಸಮಿತಿಯಿಂದ ಪಡೆಯಬೇಕು. ವಾಟ್ಸ್ಪ್ ಹಾಗೂ ಇತರೆ ರೂಪದಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಮಾಹಿತಿಗಾಗಿ ಪ್ರಾ. ಕೆ.ಎಸ್. ಬಡಿಗೇರ-9482176166, ಸಿ.ಎಂ. ಪತ್ತಾರ-9449187796, ಬಿ.ಎಂ. ಬಡಿಗೇರ-9482001657, ಆರ್.ಎಂ. ಬಡಿಗೇರ-9916765934, ವಿಜಯಕುಮಾರ ರಾಜನಾಳ-9341804366 ಇವರನ್ನು ಸಂಪರ್ಕಿಸಬಹುದು.


