ಶಿವಮೊಗ್ಗ:- ಮಹಿಳೆಯ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರಕ್ಕೆ ಯತ್ನ ನಡೆಸಿದ ಆರೋಪದಡಿ ಆರೋಪಿಯನ್ನು ರಿಪ್ಪನ್‌ಪೇಟೆ ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಜರುಗಿದೆ.
Advertisement
40 ವರ್ಷದ ಪ್ರಕಾಶ್ ಬಂಧಿತ ಆರೋಪಿ. ಅವಿವಾಹಿತ ಮಹಿಳೆಯೊಬ್ಬರ ಮೇಲೆ ಆರೋಪಿ ಮಂಗಳವಾರ ಮಧ್ಯಾಹ್ನ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾಗುತಿದ್ದಂತೆ ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ, ಸಿಪಿಐ ಗುರಣ್ಣ ಹೆಬ್ಬಾಳ್ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಲಯದ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ.