ನವದೆಹಲಿ: ದರ್ಶನ್ ಜಾಮೀನು ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆದಿದೆ. ನ್ಯಾ. ಜೆ.ಬಿ. ಪರ್ದಿವಾಲಾ ಹಾಗೂ ನ್ಯಾ ಮಹದೇವನ್ ಅವರಿರುವ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ಮಾಡಲಾಗಿದ್ದು, ವಕೀಲರ ವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಮೇ 14 ಕ್ಕೆ ಮುಂದೂಡಿತು.
ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್ 13 ರಂದು ನಟ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರಿಗೆ ಜಾಮೀನು ನೀಡಿತ್ತು. ಆ ಬಳಿಕ ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರಾಗಿತ್ತು.
ಇದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಏಪ್ರಿಲ್ 2 ರಂದು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಏಪ್ರಿಲ್ 22 ಕ್ಕೆ ಮುಂದೂಡಿತ್ತು. ಸದ್ಯ ಮಂಗಳವಾರ ವಿಚಾರಣೆ ನಡೆಸಿ ಹಲವು ಪ್ರಶ್ನೆಗಳನ್ನು ಕೇಳಿದ್ದು, ಇನ್ನಷ್ಟು ವಿಚಾರಣೆ ಅಗತ್ಯವಿದೆ ಎಂದು ಮೇ 14 ಕ್ಕೆ ಮುಂದೂಡಿಕೆ ಮಾಡಿದೆ.