ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಿಲೀಫ್

0
Spread the love

ನವದೆಹಲಿ: ಅಮಿತ್ ಶಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ.

Advertisement

ಇದೇ ವೇಳೆ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಗಾಂಧಿ ಸಲ್ಲಿಸಿದ ಮನವಿ ಸಂಬಂಧ ಜಾರ್ಖಂಡ್ ಸರ್ಕಾರ ಮತ್ತು ದೂರುದಾರ ಬಿಜೆಪಿ ಕಾರ್ಯಕರ್ತ ನವೀನ್ ಝಾ ಪ್ರತಿಕ್ರಿಯೆಯನ್ನು ಕೇಳಿದೆ. ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ನೋಟಿಸ್ಜಾರಿಗೊಳಿಸಿದೆ

ಇಂದಿನ ವಿಚಾರಣೆ ವೇಳೆ ರಾಹುಲ್ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ಪ್ರಕರಣದಲ್ಲಿ 3ನೇ ವ್ಯಕ್ತಿಯಿಂದ ದೂರು ದಾಖಲಿಸಲಾಗಿದೆ. ಮಾನನಷ್ಟ ಅಪರಾಧದ ಕ್ರಿಮಿನಲ್ಮಾನನಷ್ಟ ಮೊಕದ್ದಮೆ ವಿಷಯದಲ್ಲಿ ರೀತಿ ಮೂರನೇ ವ್ಯಕ್ತಿ ದೂರು ದಾಖಲಿಸುವುದನ್ನು ಅನುಮತಿಸಲಾಗದು ಎಂದು ಪ್ರಬಲ ವಾದ ಮಂಡಿಸಿದರು.

ಅಲ್ಲದೇ ನೀವು ಬಾಧಿತ ವ್ಯಕ್ತಿಯಲ್ಲದಿದ್ದರೆ, ನೀವು ಹೇಗೆ ಪ್ರಾಕ್ಸಿ ದೂರು ಸಲ್ಲಿಸಬಹುದು? ಎಂದು ಅರ್ಜಿದಾರರ ಪರ ವಕೀಲರನ್ನು ಸಿಂಘ್ವಿ ಪ್ರಶ್ನಿಸಿದರು. ವಾದಪ್ರತಿವಾದಗಳನ್ನು ಆಲಿಸಿದ ಬಳಿಕ ಅಂತಿಮವಾಗಿ ಕೋರ್ಟ್‌, ಜಾರ್ಖಂಡ್ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ನೀಡಿದೆ. ಮುಂದಿನ ಆದೇಶದವರೆಗೆ ವಿಚಾರಣೆಯಲ್ಲಿನ ಎಲ್ಲಾ ಪ್ರಕ್ರಿಯೆಗಳು ತಡೆಹಿಡಿಯಲ್ಪಡುತ್ತವೆ ಎಂದಿದೆ.


Spread the love

LEAVE A REPLY

Please enter your comment!
Please enter your name here