Home Karnataka News ಮಹೇಶ್‌ ಶೆಟ್ಟಿ ತಿಮರೋಡಿಗೆ ರಿಲೀಫ್: ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಮಹೇಶ್‌ ಶೆಟ್ಟಿ ತಿಮರೋಡಿಗೆ ರಿಲೀಫ್: ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

0
ಮಹೇಶ್‌ ಶೆಟ್ಟಿ ತಿಮರೋಡಿಗೆ ರಿಲೀಫ್: ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ
Spread the love

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿಗೆ ರಿಲೀಫ್ ಸಿಕ್ಕಿದ್ದು, ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್‌ ಪ್ರತಿವಾದಿಗಳಿಗೆ ನೋಟೀಸ್ ನೀಡಿದೆ. ನೋಟಿಸ್ ಜಾರಿ ಮಾಡಿ ಅ.8‌ ಕ್ಕೆ ವಿಚಾರಣೆ ಮುಂದೂಡಿದೆ.

ಗಡಿಪಾರು ಆದೇಶ ರದ್ದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ತಿಮರೋಡಿ ಅರ್ಜಿ ಸಲ್ಲಿಸಿದ್ದರು. ನ್ಯಾ. ಸಿ.ಎಂ.ಪೂನಚ್ಚ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ. ತಿಮರೋಡಿ ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ಪೆಕ್ಟರ್ ಪ್ರತಿವಾದಿಯಾಗಿಸಿದ್ದರು. ತಕ್ಷಣ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಿ ರದ್ದು ಪಡಿಸಲು ಅರ್ಜಿ ಸಲ್ಲಿಸಿದ್ದರು.

ನ್ಯಾ. ಸಿ.ಎಂ.ಪೂನಚ್ಚ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ. ತಿಮರೋಡಿ ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ಪೆಕ್ಟರ್ ಪ್ರತಿವಾದಿಯಾಗಿಸಿದ್ದರು. ತಕ್ಷಣ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಿ ರದ್ದು ಪಡಿಸಲು ಅರ್ಜಿ ಸಲ್ಲಿಸಿದ್ದರು.

ಸೆ.18 ರಂದು ತಿಮರೋಡಿಯನ್ನು ರಾಯಚೂರಿಗೆ ಗಡಿಪಾರು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದರು. 2025 ರ ಸೆ.18 ರಿಂದ 2026ರ ಸೆ.17 ರ ವರೆಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶಿಸಿದ್ದರು.


Spread the love

LEAVE A REPLY

Please enter your comment!
Please enter your name here