HomePolitics Newsಶಾಸಕ ವಿನಯ್‌ಗೆ ರಿಲೀಫ್: 2 ದಿನಗಳ ಮಧ್ಯಂತರ ಜಾಮೀನು ಮಂಜೂರು; ಕಾರಣ?

ಶಾಸಕ ವಿನಯ್‌ಗೆ ರಿಲೀಫ್: 2 ದಿನಗಳ ಮಧ್ಯಂತರ ಜಾಮೀನು ಮಂಜೂರು; ಕಾರಣ?

For Dai;y Updates Join Our whatsapp Group

Spread the love

ಧಾರವಾಡ:- ಶಾಸಕ ವಿನಯ್ ಕುಲಕರ್ಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡರ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಜಾಮೀನು ಮಂಜೂರು ಮಾಡಿದೆ.

ತಮ್ಮ ಮಗ ಹೇಮಂತ್ ಅವರಿಗೆ ಅಪಘಾತವಾಗಿದ್ದರಿಂದ ಆತನ ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸುತ್ತಿರುವುದರಿಂದ ತಮಗೆ ಜಾಮೀನು ನೀಡಬೇಕು ಎಂದು ಕೋರಿ ಶಾಸಕ ವಿನಯ್ ಅವರು ಮರಳಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕೇವಲ ಎರಡು ದಿನಗಳವರೆಗೆ ಮಾತ್ರ ಜಾಮೀನು ಮಂಜೂರು ಮಾಡಿದೆ. ಮರಳಿ ವಿನಯ್ ಕುಲಕರ್ಣಿ ಅವರು ಸೆ.11ರ ಸಂಜೆ 5ಕ್ಕೆ ಸಿಬಿಐ ಅಧಿಕಾರಿಗಳ ಎದುರು ಹಾಜರಾಗಿ ಮರಳಿ ಜೈಲು ಸೇರಬೇಕಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!