• About
  • Advertise
  • Privacy & Policy
  • Contact
Thursday, October 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home culture

ಧರ್ಮ, ದೇಶ ಮನುಷ್ಯನ ಎರಡು ಕಣ್ಣುಗಳು

News Desk by News Desk
March 15, 2024
in culture
rambhapuri
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಜಗಳೂರು : ವೈಚಾರಿಕತೆಯ ಬಿರುಗಾಳಿಯಲ್ಲಿ ಭಾರತೀಯ ಸಂಸ್ಕೃತಿ ನಾಶಗೊಳ್ಳಬಾರದು. ಧರ್ಮ ಮತ್ತು ದೇಶ ಮನುಷ್ಯನ ಎರಡು ಕಣ್ಣುಗಳಿದ್ದಂತೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಗುರುವಾರ ತಾಲೂಕಿನ ಕೊಡದಗುಡ್ಡ ಶ್ರೀ ವೀರಭದ್ರೇಶ್ವರ ಸ್ವಾಮಿ ಹೆಸರಿನಲ್ಲಿ ನಿರ್ಮಿಸಿದ ಯಾತ್ರಿ ನಿವಾಸ ಉದ್ಘಾಟನೆ ಮತ್ತು ಕಲ್ಯಾಣ ಮಂಟಪದ ಶಿಲಾನ್ಯಾಸ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಭಗವಂತನಿತ್ತ ಸಂಪತ್ತು ನಿಜವಾದ ಸಂಪತ್ತು. ದೇವರು ಎಲ್ಲರಲ್ಲೂ ಇರುವನು. ಆದರೆ ಎಲ್ಲರೂ ದೇವರಲ್ಲಿ ಇಲ್ಲ. ಸಕಲ ಭೋಗ, ಮೋಕ್ಷಗಳಿಗೆ ಧರ್ಮವೇ ಮೂಲ. ಸುಖದ ಮೂಲ ಧರ್ಮಾಚರಣೆಯಲ್ಲಿದೆ.

ಪರಿಪೂರ್ಣದೆಡೆಗೆ ಕರೆದೊಯ್ಯುವುದೇ ನಿಜವಾದ ಧರ್ಮ. ಬಾಳಿನ ಭಾಗ್ಯೋದಯಕ್ಕೆ ಧರ್ಮದ ಬೆಳಕು ಬೇಕು.

ಸಮರ ಜೀವನ ಅಮರ ಜೀವನವಾಗಲು ಸಂಸ್ಕಾರ, ಸದ್ವಿಚಾರಗಳ ಅವಶ್ಯಕತೆಯಿದೆ. ಜೀವನ ಮೌಲ್ಯಗಳನ್ನು ಸಂಪಾದಿಸಿಕೊಂಡು ಸನ್ಮಾರ್ಗದಲ್ಲಿ ನಡೆಯುವುದೇ ನಿಜವಾದ ಧರ್ಮ ಎಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿ ಧರ್ಮ ಗ್ರಂಥದಲ್ಲಿ ನಿರೂಪಿಸಿದ್ದಾರೆ. ಮನುಷ್ಯನಿಗೆ ಹೆತ್ತ ತಾಯಿ, ಹೊತ್ತ ನೆಲ ಎಷ್ಟು ಮುಖ್ಯವೋ ಅಷ್ಟೇ ಧರ್ಮವೂ ಮುಖ್ಯವೆಂಬುದನ್ನು ಮರೆಯಬಾರದು. ಕೊಡದಗುಡ್ಡ ಶ್ರೀ ವೀರಭದ್ರೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿರುವುದು ತಮಗೆ ಅತೀವ ಸಂತೋಷ ತಂದಿದೆ ಎಂದರು.

ಸಾನ್ನಿಧ್ಯ ವಹಿಸಿದ ಶ್ರೀ ಹಿಮವತ್ಕೇದಾರ ಜಗದ್ಗುರು ರಾವಲ್ ಪದವಿಭೂಷಿತ ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ತಮ್ಮ ಆಶೀರ್ವಚನದಲ್ಲಿ, ಧರ್ಮದ ದಿಕ್ಸೂಚಿ ಇಲ್ಲದೇ ಇದ್ದರೆ ಬದುಕಿಗೆ ಅರ್ಥವೇ ಇಲ್ಲ. ಸಮೃದ್ಧ, ಸದೃಢ ನಾಡು ಕಟ್ಟುವುದೇ ಧರ್ಮ ಪೀಠಗಳ ಗುರಿಯಾಗಿದೆ. ಶಿವಾಗಮಗಳು ವೀರಶೈವ ಧರ್ಮ ಸಾಹಿತ್ಯದ ಮೂಲ ಬೇರುಗಳು. ಜೀವನದ ಜಂಜಡದಲ್ಲಿ ಸಿಲುಕಿರುವ ಮನುಷ್ಯನಿಗೆ ಪುಣ್ಯ ಕ್ಷೇತ್ರಗಳು ಸ್ಫೂರ್ತಿ ಮತ್ತು ಚೈತನ್ಯವನ್ನು ನೀಡುವ ಕೇಂದ್ರಗಳಾಗಿವೆ ಎಂದರು.

ನೇತೃತ್ವ ವಹಿಸಿದ ಕಣ್ವಕುಪ್ಪೆ ಗವಿಮಠದ ಡಾ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು, ರಾಮಘಟ್ಟ ಪುರವರ್ಗ ಮಠದ ರೇವಣಸಿದ್ಧ ಶಿವಾಚಾರ್ಯ ಸ್ವಾಮಿಗಳು, ಹಾಗೂ ಶಿರಾಳಕೊಪ್ಪದ ಸಿದ್ಧೇಶ್ವರ ದೇವರು ಸಮಾರಂಭದಲ್ಲಿ ಪಾಲ್ಗೊಂಡು ಪಾತನಾಡಿದರು.

ಶಾಸಕ ಬಿ.ದೇವೇಂದ್ರಪ್ಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ದೇವೀಕೆರೆ ಜೆ.ಆರ್. ರವಿಚಂದ್ರ., ಡಿ.ಎಂ. ರುದ್ರಯ್ಯ, ಬಿಳಿಚೋಡು ಶೆಟ್ರು ಕೆ.ವೀರಣ್ಣ, ಕೋರಿ ಪ್ರಭುಲಿಂಗಪ್ಪ, ಸುರೇಶಗೌಡ್ರು, ಜೆ.ಎಸ್. ಶಿವನಗೌಡ್ರು, ಯು.ಜಿ. ಸಿವಕುಮಾರ್, ಮಂಜುನಾಥ, ನಾಗರತ್ನ ಮಲ್ಲೇಶಪ್ಪ ಪಾಲ್ಗೊಂಡು ಉಭಯ ಜಗದ್ಗುರುಗಳಿಂದ ಗೌರವ ಗುರುರಕ್ಷೆ ಸ್ವೀಕರಿಸಿದರು. ಬಿ.ಎಸ್. ಮಲ್ಲಿಕಾರ್ಜುನ ಮೊದಲ್ಗೊಂಡು ಪದಾಧಿಕಾರಿಗಳು ಉಪಸ್ಥಿತರಿದ್ದರು. ಡಿ.ಸಿ. ರುದ್ರಸ್ವಾಮಿ ಸ್ವಾಗತಿಸಿದರು. ಮಲ್ಲಿಕಾರ್ಜುನಯ್ಯ ನಿರೂಪಿಸಿದರು.

ಸಮಾರಂಭಕ್ಕೂ ಮುನ್ನ ಬಸವಾಪುರದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಕೊಡದಗುಡ್ಡದ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪದವರೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಮತ್ತು ಶ್ರೀ ಕೇದಾರ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ನೆರವೇರಿತು. ಉತ್ಸವದಲ್ಲಿ ಕುಂಭ ಹೊತ್ತ ಮಹಿಳೆಯರು, ಆರತಿ ಹಿಡಿದ ಸುಮಂಗಲೆಯರು, ಡೊಳ್ಳು, ವೀರಗಾಸೆ ಮತ್ತು ಭಜನಾ ಮಂಡಳದ ಸದಸ್ಯರು ಪಾಲ್ಗೊಂಡು ಮೆರವಣಿಗೆಗೆ ಮೆರಗು ತಂದರು.

Tags: Balehonur Sri Rambhapuri Dr. Veerasomeshwara JagadguruKodadagudda Sri Veerabhadreswara SwamiReligion Awareness CeremonyShri Himavatkedara Jagadguru Rawal Graduated Shri Bhima Shankarlinga Shivacharya BhagwatpadaSiddhanta Shikhamani Dharma GranthSri Jagadguru Renukacharya
ShareSendShare
Previous Post

ಸಂಕನೂರ ಶುಶ್ರೂಷಾ ಸಂಸ್ಥೆಯಲ್ಲಿ ಮಹಿಳಾ ದಿನಾಚರಣೆ

Next Post

ಮೋದಿಯವರನ್ನು ಬಹುಮತದೊಂದಿಗೆ ಗೆಲ್ಲಿಸಿ

News Desk

News Desk

Next Post
cc patil

ಮೋದಿಯವರನ್ನು ಬಹುಮತದೊಂದಿಗೆ ಗೆಲ್ಲಿಸಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವಾಟರ್ ಬಾಟಲ್ ಗಳ ಗುಣಮಟ್ಟ ಪರಿಶೀಲನೆಗೆ ಮುಂದಾದ ಸರ್ಕಾರ: 17 ಕಂಪನಿಗಳ ಉತ್ಪನ್ನಗಳ ತಪಾಸಣೆಗೆ 23 ತಂಡಗಳ ರಚನೆ

ವಾಟರ್ ಬಾಟಲ್ ಗಳ ಗುಣಮಟ್ಟ ಪರಿಶೀಲನೆಗೆ ಮುಂದಾದ ಸರ್ಕಾರ: 17 ಕಂಪನಿಗಳ ಉತ್ಪನ್ನಗಳ ತಪಾಸಣೆಗೆ 23 ತಂಡಗಳ ರಚನೆ

October 29, 2026
SSLC ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಇನ್ಮುಂದೆ ಮುಖ್ಯ ಪರೀಕ್ಷೆಯಂತೆ ಮಧ್ಯವಾರ್ಷಿಕ ಪರೀಕ್ಷೆ!

SSLC, ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ! ಪರೀಕ್ಷೆ-1 ಮತ್ತು ಪರೀಕ್ಷೆ-2ರ ಸಂಪೂರ್ಣ ದಿನಾಂಕಗಳು ಇಲ್ಲಿವೆ

October 29, 2026
ಮೆಟ್ರೋ ದರ ನಿಗದಿ ಮಾಡುವ ಕಮಿಟಿಯನ್ನ ನೇಮಕ ಮಾಡೋದು ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ಸಿಸಿಬಿ ತನಿಖೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್

October 29, 2026
ರಾಜ್ಯದ ಜನತೆಗೆ ಮತ್ತೊಂದು ಶಾಕ್: ಬಸ್, ಮೆಟ್ರೋ ದರ ಏರಿಕೆ ಬಳಿಕ ನಂದಿನಿ ಹಾಲಿನ ದರ ಏರಿಕೆ

BREAKING.. ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ: ಹಾಲಿನ ದರ ₹8 ಏರಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್!

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವಾಟರ್ ಬಾಟಲ್ ಗಳ ಗುಣಮಟ್ಟ ಪರಿಶೀಲನೆಗೆ ಮುಂದಾದ ಸರ್ಕಾರ: 17 ಕಂಪನಿಗಳ ಉತ್ಪನ್ನಗಳ ತಪಾಸಣೆಗೆ 23 ತಂಡಗಳ ರಚನೆ

ವಾಟರ್ ಬಾಟಲ್ ಗಳ ಗುಣಮಟ್ಟ ಪರಿಶೀಲನೆಗೆ ಮುಂದಾದ ಸರ್ಕಾರ: 17 ಕಂಪನಿಗಳ ಉತ್ಪನ್ನಗಳ ತಪಾಸಣೆಗೆ 23 ತಂಡಗಳ ರಚನೆ

October 29, 2026
SSLC ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಇನ್ಮುಂದೆ ಮುಖ್ಯ ಪರೀಕ್ಷೆಯಂತೆ ಮಧ್ಯವಾರ್ಷಿಕ ಪರೀಕ್ಷೆ!

SSLC, ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ! ಪರೀಕ್ಷೆ-1 ಮತ್ತು ಪರೀಕ್ಷೆ-2ರ ಸಂಪೂರ್ಣ ದಿನಾಂಕಗಳು ಇಲ್ಲಿವೆ

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper