ಬಾಳೆಹೊನ್ನೂರು: ರಾಜ್ಯದ ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರು ಗುರುವಾರ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠಕ್ಕೆ ಭೇಟಿ ನೀಡಿದರು. ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಹಾಗೂ ಯುಗಪುರುಷ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಪೂಜೆ ಸಲ್ಲಿಸಿದ ನಂತರ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡರು ಸೇರಿದಂತೆ ರಾಜಕೀಯ ಧುರೀಣರು ಇದ್ದರು.