ಹಾಸನ: ಸೂರ್ಯ ಹುಟ್ಟೋದು ಮಾತ್ರವಲ್ಲ, ಸೂರ್ಯ ಪ್ರಜ್ವಲಿಸುತ್ತಾನೆ ಅನ್ನೋದು ನೆನಪಿರಲಿ ಎಂದು ರಾಜ್ಯ ಸರ್ಕಾರಕ್ಕೆ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಟಾಂಗ್ ಕೊಟ್ಟಿದ್ದಾರೆ. ಚೆನ್ನರಾಯಪಟ್ಟಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೂರ್ಯ ಹುಟ್ಟೋದು ಮಾತ್ರವಲ್ಲ,
ಸೂರ್ಯ ಪ್ರಜ್ವಲಿಸುತ್ತಾನೆ ಅನ್ನೋದು ನೆನಪಿರಲಿ ಎಂದು ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ನಿಮ್ಮ ಪ್ರಜ್ವಲ್ ಅಣ್ಣ ಕೂಡ ಅಷ್ಟೇ, ನಿಮ್ಮ ಸೂರಜ್ ಅಣ್ಣ ಕೂಡ ಅಷ್ಟೇ. ಈ ಜಿಲ್ಲೆಯ ಋಣ ತೀರಿಸುವ ಕೆಲಸ ಮಾಡೇ ಮಾಡುತ್ತೇವೆ ಎಂದು ಹೇಳಿದರು.
ಇನ್ನೂ ಕೆಲವು ಅಧಿಕಾರಿಗಳು, ಕೆಲವು ವಿರೋಧಿಗಳು ನಮ್ಮ ಕಾರ್ಯಕರ್ತರಿಗೆ ಯಾವ ರೀತಿ ತೊಂದರೆ ಕೊಡುತ್ತಿದ್ದಾರೆ ಅನ್ನೋದನ್ನ ನೋಡುತ್ತಿದ್ದೇವೆ. ಯಾವುದೂ ಕೂಡ ಶಾಶ್ವತವಲ್ಲ, ಯಾವ ಸರ್ಕಾರ ಕೂಡ ಶಾಶ್ವತವಲ್ಲ. ನಾನು, ನನ್ನಿಂದ ಮಾಡಿದ್ದು ಅಂತ ಹೇಳಿದವರು ಒಮ್ಮೆ ಸ್ಮಶಾನಕ್ಕೆ ಹೋಗಿ ಬನ್ನಿ. ಎಂಥೆಂತವರು ಏನೇನ್ ಆಗಿದ್ದಾರೆ ಅನ್ನೋದು ಗೊತ್ತಾಗುತ್ತೆ ಎಂದು ಸೂರಜ್ ರೇವಣ್ಣ ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.