ಹಾವೇರಿ : ನಾನು ಸಿಎಂ ಆಗಿದ್ದಾಗ ಮೈಸೂರಿನಲ್ಲಿ ವಿಷ್ಣು ಸ್ಮಾರಕ ಉದ್ಘಾಟನೆ ಮಾಡಿದ್ವಿ ಎಂದು ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ವಿಷ್ಣುವರ್ಧನ್ ಸ್ಮಾರಕ ತೆರವಿನ ಕುರಿತು ನಗರದಲ್ಲಿ ಮಾತನಾಡಿದ ಅವರು, ವಿಷ್ಣುವರ್ಧನ್ ಬಗ್ಗೆ ಅಭಿಮಾನ ಇದೆ.
ರಾತ್ರೋರಾತ್ರಿ ಅವರ ಸ್ಮಾರಕಕ್ಕೆ ಹಾಗೆ ಮಾಡಿದ್ದು ದುಃಖ ತಂದಿತು ಎಂದರು. ನಾನು ಸಿಎಂ ಆಗಿದ್ದಾಗ ಮೈಸೂರಿನಲ್ಲಿ ವಿಷ್ಣು ಸ್ಮಾರಕ ಉದ್ಘಾಟನೆ ಮಾಡಿದ್ವಿ. ಅದಕ್ಕೆ 12 ಕೋಟಿ ರೂ ಕೊಡಲಾಗಿತ್ತು. ಈ ಸಮಸ್ಯೆ ಸೌಹಾರ್ದ ರೀತಿ ಬಗೆಹರಿಸೋದು ಸೂಕ್ತ ಅಂತ ನನ್ನ ಅಭಿಪ್ರಾಯ ಎಂದು ತಿಳಿಸಿದರು.
ಇನ್ನೂ ಹಾವೇರಿ, ಗದಗ, ಕೊಪ್ಪಳ, ರಾಯಚೂರು ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇದೆ. ಜಲಾನಯನ ಪ್ರದೇಶದಲ್ಲಿ ಹಲವು ಕುಡಿಯುವ ನೀರಿನ ಯೋಜನೆಗಳಿವೆ. ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಆಗುತ್ತೆ. ನೀರಿನ ಕೊರತೆ ತುಂಬಿಕೊಡಲು ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಮಾಡುವ ಉದ್ದೇಶವಿದೆ ಎಂದು ಹೇಳಿದರು.