HomeKarnataka Newsಖ್ಯಾತ ವೈದ್ಯೆ, ಮಗ ಆತ್ಮಹತ್ಯೆ: ಕೈತುಂಬಾ ದುಡ್ಡಿದ್ರೂ ನೋ ಯೂಸ್!

ಖ್ಯಾತ ವೈದ್ಯೆ, ಮಗ ಆತ್ಮಹತ್ಯೆ: ಕೈತುಂಬಾ ದುಡ್ಡಿದ್ರೂ ನೋ ಯೂಸ್!

For Dai;y Updates Join Our whatsapp Group

Spread the love

ಶಿವಮೊಗ್ಗ:- ಪ್ರತಿಷ್ಠಿತ ವೈದ್ಯೆ ಮತ್ತು ಅವರ ಮಗ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ಅಶ್ವಥ್ ನಗರ ಬಡಾವಣೆಯಲ್ಲಿ ಜರುಗಿದೆ.

ಡಾ. ಜಯಶ್ರೀ (55) ಹಾಗೂ ಅವರ ಮಗ ಆಕಾಶ್ (34) ಆತ್ಮಹತ್ಯೆಗೆ ಶರಣಾದವರು. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪ್ರಕರಣ ದಾಖಲಿಸಿಕೊಂಡು, ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಾವಿಗೂ ಮುನ್ನ ತಾಯಿ ಮತ್ತು ಮಗ ಇಬ್ಬರೂ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂಬ ಮಾಹಿತಿಯಿದೆ. ಅದರಲ್ಲಿ ತಮ್ಮ ಹೆಸರಿನಲ್ಲಿದ್ದ ಆಸ್ತಿಯನ್ನು ಸೊಸೆಯ ಹೆಸರಿಗೆ ಬರೆದಿಟ್ಟು ಬಳಿಕ ಈ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೌಟುಂಬಿಕ ಸಮಸ್ಯೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. 15 ತಿಂಗಳ ಹಿಂದೆ ಮೃತ ಆಕಾಶ್ ಅವರ ಮೊದಲ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಳೆದ ಮೇ ತಿಂಗಳಲ್ಲಿ ಆಕಾಶ್ ಅವರಿಗೆ ಎರಡನೇ ಮದುವೆಯಾಗಿತ್ತು.

ಆಕಾಶ್‌ ರಿಯಲ್ ಎಸ್ಟೇಟ್‌ನಲ್ಲಿ ತಾನು ಹಣ ತೊಡಿಸಬೇಕು ಎಂದು ಅದಕ್ಕಾಗಿ ನನಗೆ ಹಣ ಬೇಕು ಎಂದು ಕೇಳುತ್ತಿದ್ದ ಎನ್ನಲಾಗುತ್ತಿದೆ. ಇದಕ್ಕೋಸ್ಕರನೇ ತಾಯಿ ಮತ್ತು ಮಗನ ಮಧ್ಯೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು. ಇದು ಇತ್ತೀಚಿಗೆ ಮದುವೆಯಾಗಿ ಬಂದ ನವ್ಯಗೆ ಕೂಡ ಮಾಮೂಲಾಗಿತ್ತು. ಆದರೆ ಈ ಜಗಳ ವಿಕೋಪಕ್ಕೆ ಹೋಗಿದ್ದು ಅದು ಈ ಆತ್ಮಹತ್ಯೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಈ ಪ್ರಕರಣದಲ್ಲಿ ಮೊದಲು ಡಾಕ್ಟರ್ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಬರೆದಿಟ್ಟಿದ್ದಾರೆ ಇದನ್ನು ನೋಡಿದ ಮಗ ಆಕಾಶ್ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!