ಖ್ಯಾತ ಸಾಹಿತಿ 80 ವರ್ಷದ ಎಚ್.ಎಸ್. ವೆಂಕಟೇಶಮೂರ್ತಿ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
80 ವರ್ಷ ವಯಸ್ಸಿನ ಎಚ್‌ಎಸ್‌ವಿ ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ.
1944ರ ಜೂನ್ 23ರಂದು ವೆಂಕಟೇಶಮೂರ್ತಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊದಿಗೆರೆ ಎಂಬ ಹಳ್ಳಿಯಲ್ಲಿ ಜನಿಸಿದರು. ಅವರದ್ದು ಮಧ್ಯಮವರ್ಗದ ಕುಟುಂಬ. ಇವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ, ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂಎ ಪದವಿ ಪಡೆದರು. ‘ಕನ್ನಡದಲ್ಲಿ ಕಥನ ಕವನಗಳು’ ಮಹಾಪ್ರಬಂಧ ಮಂಡಿಸಿ ಪಿಎಚ್.ಡಿ. ಪದವಿ ಪಡೆದರು. 1973ರಲ್ಲಿ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ನೇಮಕ ಆದರು. 2000ರಲ್ಲಿ ಅವರು ನಿವೃತ್ತಿ ಹೊಂದಿದರು. ಆ ಬಳಿಕವೂ ಬೆಂಗಳೂರನಲ್ಲೇ ನೆಲಿಸಿದ್ದ ಅವರು, ಬರಹ ಕೃಷಿಯಲ್ಲಿ ತೊಡಗಿಕೊಂಡಿದ್ದರು.
ವೆಂಕಟೇಶಮೂರ್ತಿ ಅವರಿಗೆ ಬಣ್ಣದ ಲೋಕದ ಮೇಲೆ ಒಲವು ಮೂಡಲು ಕಾರಣ ಆಗಿದ್ದು ಯಕ್ಷಗಾನ, ಬಯಲಾಟದಂಥ ರಂಗಪ್ರದರ್ಶನಗಳು. ಅವರು ಬಾಲ್ಯದಲ್ಲಿ ಇದ್ದಾಗ ಸಾಕಷ್ಟು ಕೃತಿಗಳನ್ನು ಅವರು ಓದುತ್ತಿದ್ದರು. ಅವರು ಕವಿಯಾಗಿ, ನಾಟಕಕಾರನಗಿಯೂ ಗುರುತಿಸಿಕೊಂಡಿದ್ದಾರೆ. ಚಿತ್ರರಂಗಕ್ಕೂ ವೆಂಕಟೇಶಮೂರ್ತಿ ಅಪಾರ ಕೊಡುಗೆ ನೀಡಿದ್ದರು ಎನ್ನಲಾಗಿದೆ.