ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಮಾಜಿ ಮುಖ್ಯಸ್ಥ ಡಾ.ಕಸ್ತೂರಿರಂಗನ್ ಇನ್ನಿಲ್ಲ!

0
Spread the love

ಬೆಂಗಳೂರು: ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ಅವರು (84) ವಿಧಿವಶರಾಗಿದ್ದಾರೆ. ಬೆಂಗಳೂರಿನ ಕೊಡಿಗೆಹಳ್ಳಿಯ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿ ಅವರು ನಿಧನರಾಗಿದ್ದು, ಕಸ್ತೂರಿರಂಗನ್ 1994ರಿಂದ 2003ರ ಅವಧಿಯಲ್ಲಿ 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಸ್ಥೆಯ(ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.

Advertisement

ಈ ಅವಧಿಯಲ್ಲಿ ಇಸ್ರೋ ಹಲವು ಸಾಧನೆಗಳನ್ನು ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಭಾರತದ ಪ್ರತಿಷ್ಠಿತ ಉಡಾವಣಾ ವಾಹನವಾದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಯಶಸ್ವಿ ಉಡಾವಣೆಯ ಜೊತೆಗೆ ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಜಿಎಸ್‌ಎಲ್‌ವಿ)ನ ಮೊದಲ ಯಶಸ್ವಿ ಹಾರಾಟ ಪರೀಕ್ಷೆಯೂ ಸೇರಿದಂತೆ ಹಲವಾರು ಪ್ರಮುಖ ಮೈಲಿಗಲ್ಲುಗಳಿಗೆ ಇವರು ಸಾಕ್ಷಿಯಾಗಿದ್ದರು.


Spread the love

LEAVE A REPLY

Please enter your comment!
Please enter your name here