ಕೋರಿಹುಳ ಎಂದಿದ್ದ ಶಾಸಕ ಶಾಂತನಗೌಡಗೆ ರೇಣುಕಾಚಾರ್ಯ ತಿರುಗೇಟು

0
Spread the love

ದಾವಣಗೆರೆ: ಕೋರಿಹುಳ ಎಂದಿದ್ದ ಶಾಸಕ ಶಾಂತನಗೌಡ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ, ನಾನೇನು ಅರ್ಜಿ ಹಾಕಿಕೊಂಡು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆಯೇ ? ಎಂದು ಖಾರವಾಗಿ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಮಾತನಾಡಿದ ಅವರು, ನಾನು ಬಿಜೆಪ ಬಿಡುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಅದೇ ರೀತಿ ಕಾಂಗ್ರೆಸ್ ಸೇರುತ್ತೇನೆಂದು ಹೇಳಿಲ್ಲ. ಬಿಜೆಪಿಯಲ್ಲಿ ಈಗಲೂ ನಾನು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಕಾಂಗ್ರೆಸ್ ಸೇರಲು ನಾನು ಅರ್ಜಿ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವರಾದ ಕೃಷ್ಣಭೈರೇಗೌಡ, ಎಸ್.ಎಸ್. ಮಲ್ಲಿಕಾರ್ಜುನ್,  ಚೆಲುವರಾಯಸ್ವಾಮಿ ಅವರುಗಳನ್ನು ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಭೇಟಿ ಮಾಡಿದ್ದೆ. ರಾಜ್ಯದ ಮುಖ್ಯಮಂತ್ರಿಯನ್ನು ಯಾರು ಬೇಕಾದರೂ ಭೇಟಿ ಮಾಡಬಹುದು ಎಂದು ಹೇಳಿದರು. ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಎಂದಿಗೂ ರಾಜಕಾರಣ ಮಾಡಿಲ್ಲ. ಈ ಹಿಂದೆ ಶಾಂತನಗೌಡರು ಎರಡು ಬಾರಿ ಶಾಸಕರಾಗಿದ್ದಾಗಲೂ ನಾನು ಸಂಪೂರ್ಣ ಸಹಕಾರ ಕೊಟ್ಟಿದ್ದೇನೆ. ಕ್ಷೇತ್ರದಲ್ಲಿ ಬರಗಾಲ ಇರುವುದರಿಂದ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಅವರನ್ನು ಭೇಟಿ ಮಾಡಿದರೆ ಶಾಂತನಗೌಡರಿಗೆ ಏಕೆ ಸಿಟ್ಟು ಎಂದು ಪ್ರಶ್ನಿಸಿದರು.


Spread the love

LEAVE A REPLY

Please enter your comment!
Please enter your name here