ರೇಣುಕಾಸ್ವಾಮಿ ಕೇಸ್ ದೋಷಾರೋಪಣೆ: ನವೆಂಬರ್‌ 10ಕ್ಕೆ ದರ್ಶನ್‌ ವಿಚಾರಣೆ ಮುಂದೂಡಿಕೆ !

0
Spread the love

ರೇಣುಕಾಸ್ವಾಮಿ ಕೊಲೆ ಸಂಬಂಧ ದೋಷಾರೋಪ ನಿಗದಿ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳು ಬೆಂಗಳೂರಿನ 64 ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.  ಬೆಂಗಳೂರಿನ 64 ಸಿಸಿಹೆಚ್ ಕೋರ್ಟ್‌ಗೆ ಖುದ್ದು ಹಾಜರಾಗಬೇಕು ಎಂದು ಎಲ್ಲಾ ಆರೋಪಿಗಳಿಗೆ ನ್ಯಾಯಾಧೀಶರು ಈ ಮೊದಲೇ ತಿಳಿಸಿದ್ದರು.

Advertisement

ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 6 ಆರೋಪಿಗಳನ್ನು ಪೊಲೀಸರು ನ್ಯಾಯಾಲಕ್ಕೆ ಕರೆತಂದರು. ಉಳಿದಂತೆ ಜಾಮೀನಿನ ಮೇಲೆ ಹೊರಗಿದ್ದ 11 ಆರೋಪಿಗಳು ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು ಕೂಡ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಹಾಗಾಗಿ ಮುಂದಿನ ಹಂತದ ಸಾಕ್ಷಿಗಳ ವಿಚಾರಣೆಗೆ ನ್ಯಾಯಾಲಯ ದಿನಾಂಕ ನಿಗದಿ ಮಾಡಿದೆ. ನವೆಂಬರ್ 10ರಂದು ವಿಚಾರಣೆಗೆ ದಿನಾಂಕ ನಿಗದಿ ಆಗಿದೆ.

ಇದು ಹೈಪ್ರೊಫೈಲ್ ಕೇಸ್ ಆದ್ದರಿಂದ ಕೋರ್ಟ್ ಹಾಲ್​​ನಲ್ಲಿ ಅನೇಕ ವಕೀಲರು ಕಿಕ್ಕಿರಿದಿದ್ದರು. ಜನದಟ್ಟಣೆಯನ್ನು ನೋಡಿ ನ್ಯಾಯಾಧೀಶರು ನಕ್ಕರು. ಕೇಸ್​​ಗೆ ಸಂಬಂಧ ಇರದ ಎಲ್ಲರೂ ಹೊರಗೆ ಹೋಗುವಂತೆ ಸೂಚಿಸಲಾಯಿತು. ಆದರೂ ಕೂಡ ಗದ್ದಲ ನಿಲ್ಲಲಿಲ್ಲ. ಬಳಿಕ ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸಲು ಜಡ್​ಜ್ ನಿರ್ಧರಿಸಿದರು. ಜನರನ್ನು ಕದಲಿಸಿದ ನಂತರ ದೋಷಾರೋಷಣೆ ನಿಗದಿ ಪ್ರಕ್ರಿಯೆ ಆರಂಭ ಮಾಡಲಾಯಿತು.

ಜಡ್ಜ್ ಸಮ್ಮುಖದಲ್ಲಿ ಆರೋಪಿಗಳನ್ನು ಪೊಲೀಸರು ನಿಲ್ಲಿಸಿದರು. ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಒಬ್ಬೊಬ್ಬರ ಹೆಸರನ್ನೇ ಬೆಂಚ್ ಕ್ಲರ್ಕ್ ಕರೆದರು. ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಒಂದಷ್ಟು ಪ್ರಶ್ನೆಗಳನ್ನು ಜಡ್ಜ್ ಕೇಳಿದರು.

ಕೊಲೆ, ಅಪಹರಣ, ಸಾಕ್ಷಿನಾಶ, ಅಕ್ರಮ ಕೂಟ, ಕ್ರಿಮಿನಲ್ ಒಳಸಂಚು ಸೇರಿದಂತೆ ಹಲವು ಆರೋಪಗಳನ್ನು ದರ್ಶನ್ ಮೇಲೆ ಹೊರಿಸಲಾಗಿದೆ. ಎಲ್ಲ ಆರೋಪಿಗಳ ಎದುರು ದೋಷಾರೋಪಗಳನ್ನು ಓದಿ ಹೇಳಲಾಯಿತು. ಆರೋಪ ಒಪ್ಪಿಕೊಂಡರೆ ಶಿಕ್ಷೆ ಪ್ರಕಟ ಆಗುತ್ತಿತ್ತು. ಆರೋಪಗಳನ್ನು ಒಪ್ಪಿಕೊಳ್ಳದ ಕಾರಣ ಸಾಕ್ಷ್ಯಗಳ ವಿಚಾರಣೆಗೆ ದಿನಾಂಕ ನಿಗದಿ ಆಗಿದೆ.


Spread the love

LEAVE A REPLY

Please enter your comment!
Please enter your name here