ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅನಾರೋಗ್ಯದ ಕಾರಣದಿಂದ ಜಾಮೀನು ಪಡೆದಿರುವ ದಾಸ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬೇಲ್ ಅರ್ಜಿ ವಿಚಾರಣೆ ನಡೆಯಿತು. ಸಿವಿ ನಾಗೇಶ್ ಸತತ ವಾದ ಆಲಿಸಿದ ನ್ಯಾಯಾಧೀಶರು ನವೆಂಬರ್ 28ಕ್ಕೆ ವಿಚಾರಣೆಯನ್ನು ಮುಂದೂಡಿದ್ದಾರೆ.
ದರ್ಶನ್ ಪರ ವಕೀಲರು ಹೈಕೋರ್ಟ್ ಅಂಗಳದಲ್ಲಿ ಜೋರಾಗಿಯೇ ವಾದ ಮಂಡಿಸಿದ್ದಾರೆ. ತನಿಖೆ ವೇಳೆ ನಟ ದರ್ಶನ್ ವಿರುದ್ಧ ಸಾಕ್ಷಿಗಳನ್ನು ಸೃಷ್ಟಿಸಿದ್ದಾರೆ ಎಂದು ವಾದ ಮಂಡಿಸಿದ್ರು. ದರ್ಶನ್ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ಓದಿ ಹೇಳಿದ್ರು.
ವಾದ ಮಂಡನೆಯಲ್ಲಿ ದರ್ಶನ್ ಕೊಲೆ ಮಾಡಿಲ್ಲವೆಂದು, ರೇಣುಕಾ ಸ್ವಾಮಿಯ ಅಪಹರಣವೇ ಆಗಿಲ್ಲ ಎಂದು ವಾದ ಮಂಡಿಸಿದರು. ಅಲ್ಲದೆ ದರ್ಶನ್ ಅನ್ನು ಸಿಕ್ಕಿಹಾಕಿಸುವ ಪ್ರಯತ್ನ ನಡೆದಿರುವ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದರು. ಸತತ 3 ಗಂಟೆಗಳ ಕಾಲ ದರ್ಶನ್ ಪರ ವಕೀಲರ ವಾದ ಆಲಿಸಿದ ನ್ಯಾಯಾಧೀಶರು ನವೆಂಬರ್ 28 ಗುರುವಾರಕ್ಕೆ ವಿಚಾರಣೆಯನ್ನು ಮುಂದೂಡಿದ್ದಾರೆ.



