ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ. ಜೈಲಿನಿಂದ ಆಚೆ ಬರಲು ಪವಿತ್ರ ಗೌಡ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಹೈಕೋರ್ಟ್ ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾಯಮೂರ್ತಿಗಳು ಈಗಾಗಲೇ ಪ್ರಕರಣದ ಬಗ್ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಚಾರ್ಜ್‌ಶೀಟ್ ಸಲ್ಲಿಕೆ ಮಾಡುವ ಮೊದಲು ನೀವು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದೀರಿ.
ಹೀಗಾಗಿ ನೀವು ವಾಪಸ್ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಸೂಚಿಸಿದರು. ನ್ಯಾಯಾಧೀಶರಿಂದ ಸೂಚನೆ ಬಂದ ಹಿನ್ನಲೆಯಲ್ಲಿ ಪವಿತ್ರಾ ಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ.