ನಟ ದರ್ಶನ್ ತೂಗುದೀಪ ಅವರಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ್ದು, ಇದೀಗ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮೀ ನಿವಾಸದಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಬಂಧನಕ್ಕೆ ಒಳಪಡಿಸಿರುವ ಪೊಲೀಸರು ಅನ್ನಪೂರ್ಣೇಶ್ವರಿ ಠಾಣೆಗೆ ಕರೆದುಕೊಂಡು ಬರಲಾಗುತ್ತಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು.
ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಇದೀಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ನಟ ದರ್ಶನ್, ಪವಿತ್ರಾ ಗೌಡ ಹಾಗೂ 7 ಆರೋಪಿಗಳ ಜಾಮೀನು ಅನ್ನು ರದ್ದು ಮಾಡಿದೆ.