ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಅದರಂತೆ 7ನೇ ಆರೋಪಿಯಾಗಿರುವ ಅನುಕುಮಾರ್ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ರಿಲೀಸ್ ಆಗಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಅನುಕುಮಾರ್ ಕೈಯಲ್ಲಿ ಭಗವದ್ಗೀತೆ ಪುಸ್ತಕ ಹಿಡಿದು ಹೊರಬಂದಿದ್ದಾರೆ. ಬೆಂ
Advertisement
ಗಳೂರಿನ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಕಾರಾಗೃಹಕ್ಕೆ ವರ್ಗಾವಣೆಯಾಗುವಾಗ ನಟ ದರ್ಶನ್ ನೀಡಿದ್ದ ಭಗವದ್ಗೀತೆ ಪುಸ್ತಕದೊಂದಿಗೆ ಕಾಲ ಕಳೆದಿದ್ದ ಅನುಕುಮಾರ್, ಅದೇ ಪುಸ್ತಕ ಹಿಡಿದು ಹೊರಬಂದಿದ್ದು ಬಳಿಕ ತನ್ನ ಸಹೋದರನೊಂದಿಗೆ ತೆರಳಿದ್ದಾನೆ. ಕಳೆದ ಶುಕ್ರವಾರ ಅನುಕುಮಾರ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಅನುಕುಮಾರ್ ಅವರನ್ನು ಇಂದು ಬಿಡುಗಡೆ ಮಾಡಲಾಗಿದೆ.