ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಅಥವಾ ನಾಳೆ ಕೋರ್ಟ್‌ʼಗೆ ಚಾರ್ಜ್‌ʼಶೀಟ್‌ ಸಲ್ಲಿಕೆ!

0
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ಗೆ ಸಂಕಷ್ಟಗಳು ಒಂದರ ಹಿಂದೊಂದು ಹೆಚ್ಚಾಗುತ್ತಲೇ ಇವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆಮ್ಮದಿಯ ದಿನ ಕಳೆಯುತ್ತಿದ್ದ ದರ್ಶನ್​ ಈಗ ಸ್ವಯಂಕೃತ ಅಪರಾಧದಿಂದಾಗಿ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿದ್ದಾರೆ. ದರ್ಶನ್ ಬಂಧನವಾಗಿ ಮೂರು ತಿಂಗಳಾಗುತ್ತಾ ಬಂದಿದ್ದು, ಮುಂದಿನ ದಿನಗಳು ಇನ್ನಷ್ಟು ಕಠಿಣವಾಗಿರಲಿವೆ ಎನ್ನಲಾಗುತ್ತಿದೆ.

Advertisement

ಇನ್ನೂ ರೇಣುಕಾ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲಿ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗುತ್ತದೆ. ಎಸ್‌ಐಟಿ ಪೊಲೀಸರು ಚಾರ್ಜ್‌ಶೀಟ್‌ ಪೂರ್ಣಗೊಳಿಸುತ್ತಿದ್ದಾರೆ. ಆರೋಪ ಪಟ್ಟಿಯನ್ನು 2-3 ಬಾರಿ ಕಾನೂನು ತಜ್ಞರಿಂದ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಹೆಡ್ ಆಫ್ ದಿ ಚಾರ್ಜ್‌ಶೀಟ್‌ ಹೇಗಿರಬೇಕು? ಪ್ರಕರಣದಲ್ಲಿನ ಸಾಕ್ಷಿಗಳ ಹೇಳಿಕೆ ಎಲ್ಲಿ ಹಾಕಬೇಕು? ಡಿಜಿಟಲ್‌ ಸಾಕ್ಷ್ಯಗಳನ್ನು ಹೇಗೆ ನಮೂದಿಸಬೇಕು? ಹೀಗೆ ಎಲ್ಲಾ ಅಂಶಗಳಲ್ಲೂ ಪೊಲೀಸರು ಫುಲ್‌ ಅಲರ್ಟ್‌ ಆಗಿದ್ದಾರೆ.

ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ್‌ ಅವರು ಖುದ್ದು ಚಾರ್ಜ್‌ಶೀಟ್‌ ಡ್ರಾಫ್ಟ್‌ ಕಾಪಿ ಮೇಲೆ ನಿಗಾ ಇಟ್ಟಿದ್ದಾರೆ. ಬಹುತೇಕ ಪ್ರಕರಣದಲ್ಲಿ ಚಾರ್ಜ್‌ಶೀಟ್‌ನಲ್ಲಿರುವ ಲೋಪ ವಿಚಾರವನ್ನು ವಕೀಲರು ಪ್ರಸ್ತಾಪ ಮಾಡಿ ಆರೋಪಿಗಳನ್ನು ಪಾರು ಮಾಡುತ್ತಾರೆ. ಈ ಕಾರಣಕ್ಕೆ ಕಾನೂನು ತಜ್ಞರಿಂದ ಸಲಹೆ ಪಡೆದು ಆರೋಪ ಪಟ್ಟಿ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಲಾಗಿದೆ.


Spread the love

LEAVE A REPLY

Please enter your comment!
Please enter your name here