ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಪ್ರದೋಷ್ ಅವರ ತಂದೆ ನಿಧನ ಹೊಂದಿರುವ ಹಿನ್ನಲೆಯಲ್ಲಿ, ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಕೋರ್ಟ್ ಅನುಮತಿ ನೀಡಿದೆ.
Advertisement
ಪ್ರದೋಷ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅಂತ್ಯಕ್ರಿಯೆ ವೇಳೆ ತಾನು ಹಾಜರಾಗಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ ಕೋರ್ಟ್, ಆರೋಪಿಗೆ ಅಗತ್ಯ ಭದ್ರತೆ ಒದಗಿಸುವಂತೆ ಹಾಗೂ ಬೆಂಗಾವಲು ಒದಗಿಸಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಮತಿಸುವಂತೆ ಸೂಚಿಸಿದೆ.
ಕಾಮಾಕ್ಷಿಪಾಳ್ಯ ಪೊಲೀಸರಿಗೆ ಕೋರ್ಟ್ ಇ-ಮೇಲ್ ಮೂಲಕ ಅಧಿಕೃತ ಸೂಚನೆ ನೀಡಿದ್ದು, ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧನದಲ್ಲಿರುವ ಪ್ರದೋಷ್ ಅವರನ್ನು ನಾಳೆ(ಶುಕ್ರವಾರ) ಅಂತ್ಯಕ್ರಿಯೆಗಾಗಿ ಕರೆತರಲಾಗುವುದು ಎಂದು ಮಾಹಿತಿ ಲಭ್ಯವಾಗಿದೆ.


