HomeBengaluru Newsರೇಣುಕಾಸ್ವಾಮಿ ಕೊಲೆ ಕೇಸ್: ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್; ಅ.15ಕ್ಕೆ ಹಾಜರಾಗಲು ಸೂಚನೆ

ರೇಣುಕಾಸ್ವಾಮಿ ಕೊಲೆ ಕೇಸ್: ಚಿಕ್ಕಣ್ಣ, ಯಶಸ್ ಸೂರ್ಯಗೆ ಕೋರ್ಟ್ ಸಮನ್ಸ್; ಅ.15ಕ್ಕೆ ಹಾಜರಾಗಲು ಸೂಚನೆ

For Dai;y Updates Join Our whatsapp Group

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಮತ್ತೊಂದು ಹಂತಕ್ಕೆ ತಲುಪಿದ್ದು, ಇದೀಗ ಸ್ಯಾಂಡಲ್‌ವುಡ್‌ನ ಇಬ್ಬರು ನಟರಿಗೆ ಕೋರ್ಟ್ ಸಮನ್ಸ್ ಜಾರಿಯಾಗಿದೆ.

ನಟರಾದ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅಕ್ಟೋಬರ್ 15ರಂದು ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಬೇಕಿದೆ.

ಈ ಪ್ರಕರಣದಲ್ಲಿ ಚಿಕ್ಕಣ್ಣ ಅವರ ಹೇಳಿಕೆ ಇದೀಗ ಸಾಕಷ್ಟು ಕುತೂಹಲ ಮೂಡಿಸಿದೆ. ಕಾರಣ, ರೇಣುಕಾಸ್ವಾಮಿ ಹತ್ಯೆ ನಡೆದ ದಿನ ದರ್ಶನ್ ಭಾಗವಹಿಸಿದ್ದ ಪಾರ್ಟಿಯಲ್ಲಿ ಚಿಕ್ಕಣ್ಣ ಕೂಡ ಇದ್ದರು ಎನ್ನಲಾಗಿದೆ.

2024ರ ಜೂನ್ 8ರಂದು ಆರ್‌ಆರ್ ನಗರದ ‘ಸ್ಟೋನಿಬ್ರೂಕ್’ ರೆಸ್ಟೋರೆಂಟ್‌ನಲ್ಲಿ ಪಾರ್ಟಿ ನಡೆದಿತ್ತು. ದರ್ಶನ್ ಈ ಪಾರ್ಟಿಯಲ್ಲಿ ಭಾಗವಹಿಸಿದ್ದರೆ, ಚಿಕ್ಕಣ್ಣ ಕೂಡ ಅಲ್ಲಿದ್ದರು. ಹೀಗಾಗಿ ಹತ್ಯೆಗೂ ಮುನ್ನ ದರ್ಶನ್ ಎಲ್ಲಿದ್ದರು, ಯಾರ ಜೊತೆಗಿದ್ದರು ಹಾಗೂ ಅವರ ವರ್ತನೆ ಹೇಗಿತ್ತು ಎಂಬುದಕ್ಕೆ ಚಿಕ್ಕಣ್ಣ ಅವರ ಸಾಕ್ಷ್ಯ ಮಹತ್ವ ಪಡೆದುಕೊಂಡಿದೆ.

ತನಿಖಾಧಿಕಾರಿಗಳು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಚಿಕ್ಕಣ್ಣ ಅವರನ್ನು ದರ್ಶನ್ ವಿರುದ್ಧದ ಪ್ರಮುಖ ಸಾಕ್ಷಿಯಾಗಿ ಸೇರಿಸಲಾಗಿದೆ. ಈ ಹಿಂದೆ ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಿಆರ್‌ಪಿಸಿ 164ರ ಅಡಿಯಲ್ಲಿ ಸ್ವಯಂಪ್ರೇರಿತ ಹೇಳಿಕೆಯನ್ನೂ ದಾಖಲಿಸಿದ್ದಾರೆ.

ಇದೀಗ ನ್ಯಾಯಾಲಯದ ಮುಂದೆ ಪ್ರತ್ಯಕ್ಷವಾಗಿ ಸಾಕ್ಷ್ಯ ನೀಡುವ ಸರದಿ ಬಂದಿದೆ. ಅಕ್ಟೋಬರ್ 15ರಂದು ಚಿಕ್ಕಣ್ಣ ನ್ಯಾಯಾಲಯದಲ್ಲಿ ಏನು ಹೇಳಲಿದ್ದಾರೆ? ಅಂದು ಅವರು ನೀಡುವ ಹೇಳಿಕೆ ಪ್ರಕರಣದ ವಿಚಾರಣೆಯಲ್ಲಿ ಯಾವ ರೀತಿಯ ಮಹತ್ವ ಪಡೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇನ್ನು ನಟ ಚಿಕ್ಕಣ್ಣ ಹಾಗೂ ದರ್ಶನ್ ನಡುವೆ ಹಲವು ವರ್ಷಗಳ ಆಪ್ತ ಒಡನಾಟವಿತ್ತು. ಆದರೆ ಪ್ರಕರಣದಲ್ಲಿ ಚಿಕ್ಕಣ್ಣ ಸಾಕ್ಷಿಯಾಗಿರುವ ಹಿನ್ನೆಲೆಯಲ್ಲಿ, ತಮ್ಮ ಮದುವೆಗೆ ದರ್ಶನ್ ಅವರನ್ನು ಆಹ್ವಾನಿಸಿರಲಿಲ್ಲ ಎನ್ನಲಾಗಿದೆ.

ಇದೇ ಪ್ರಕರಣದಲ್ಲಿ ದರ್ಶನ್ ಆಪ್ತ ಪ್ರದೋಷ್ ಕೂಡ ಮಾಫಿ ಸಾಕ್ಷಿಯಾಗಿದ್ದಾರೆ. ಹೀಗಾಗಿ ಪ್ರಕರಣದ ಪ್ರಮುಖ ಸಾಕ್ಷಿಗಳ ಹೇಳಿಕೆಗಳು ಮುಂದಿನ ವಿಚಾರಣೆಯಲ್ಲಿ ನಿರ್ಣಾಯಕವಾಗುವ ಸಾಧ್ಯತೆ ಇದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img