Advertisement
ತಮ್ಮನ್ನು ಬಿಸಿಲು ಚೆನ್ನಾಗಿ ಬರುವ ಬ್ಯಾರಕ್ಗೆ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ. ಮಾತ್ರವಲ್ಲದೆ ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್ಶೀಟ್ಗಳು ಬೇಕೆಂದು ಮನವಿ ಮಾಡಿದ್ದಾರೆ. ಆದರೆ ಇದ್ಯಾವುದಕ್ಕೂ ಜೈಲು ಅಧೀಕ್ಷಕರು ಅನುಮತಿ ನೀಡಿಲ್ಲ. ಹೀಗಾಗಿ ದರ್ಶನ್ ಪರ ವಕೀಲು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಮಾನವ ಆಯೋಗಕ್ಕೆ ಪತ್ರ ಬರೆದು ತಮಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ದೂರು ನೀಡಲಿದ್ದಾರೆ. ನ್ಯಾಯಾಲಯದಲ್ಲಿ ವಾದ-ಪ್ರತಿವಾದದ ವೇಳೆಯೂ ಸಹ ದರ್ಶನ್ ಪರ ವಕೀಲರು, ಜೈಲಧಿಕಾರಿಗಳು ಅಮಾನವೀಯವಾಗಿ ದರ್ಶನ್ ಜೊತೆಗೆ ನಡೆದುಕೊಳ್ಳುತ್ತಿದ್ದಾರೆ ಎಂದು ವಾದಿಸಿದ್ದರು. ಇದೇ ಕಾರಣಕ್ಕೆ ಈಗ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಲು ದರ್ಶನ್ ಮುಂದಾಗಲಿದ್ದಾರೆ.