ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ಇಂದು ಮತ್ತೆ ನಗರದ 57ನೇ ಸಿಸಿಹೆಚ್ ಕೋರ್ಟ್‌ಗೆ ಹಾಜರಾಗಲಿದ್ದಾರೆ.
Advertisement
ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಇಂದು ಎಲ್ಲರೂ ಕೋರ್ಟ್‌ಗೆ ಹಾಜರಾಗುತ್ತಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ.
ನಿನ್ನೆಯಷ್ಟೆ ನಟ ದರ್ಶನ್ ಹಾಗೂ ವಿಜಯಲಕ್ಷ್ಮೀ ದಂಪತಿ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದರು.