ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನ ದರ್ಶನ್, ಪವಿತ್ರಾಗೌಡ ಸೇರಿ ಆರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ನಟ ದರ್ಶನ್, ಪವಿತ್ರಾಗೌಡ, ನಾಗರಾಜ್, ಅನುಕುಮಾರ್, ಲಕ್ಷ್ಮಣ್ ಮತ್ತು ಜಗದೀಶ್ ಸೇರಿ ಒಟ್ಟು ಆರು ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೇ ಮಧ್ಯಂತರ ಜಾಮೀನಿಮ ಮೇಲೆ ನಟ ದರ್ಶನ್ ಹೊರಗಡೆ ಇದ್ರೆ, ಇತ್ತ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಲ್ಲಿದ್ದಾರೆ.
ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್, ಈವರೆಗೂ ಸರ್ಜರಿ ಮಾಡಿಸಿಲ್ಲ. ಈ ಬಗ್ಗೆ ಎಸ್ಪಿಪಿ ಪ್ರಸನ್ನಕುಮಾರ್ ಆಕ್ಷೇಪಿಸಿದ್ದರು. ದರ್ಶನ್ ಅನಾರೋಗ್ಯ ಸಂಬಂಧ ಹೈಕೋರ್ಟ್ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಸಿಸಲಾಗಿದೆ. ದಾಸನ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರಿಂದ ವೈದ್ಯಕೀಯ ವರದಿ ಸಲ್ಲಿಕೆ ಮಾಡಲಾಗಿದ್ದು,
ಮೆಡಿಕಲ್ ರಿಪೋರ್ಟ್ ಮೇಲೆ ಇಂದು ಎಸ್ಪಿಪಿ ಪ್ರಸನ್ನ ಕುಮಾರ್ ವಾದಿಸಲಿದ್ದಾರೆ. ಕೊಲೆ ಪ್ರಕರಣದಲ್ಲಿ 131 ದಿನ ಜೈಲಿನಲ್ಲಿದ್ದ ನಟ ದರ್ಶನ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಹೈಕೋರ್ಟ್ 6 ವಾರಗಳ ಕಾಲ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನಿನ ಅವಧಿ ಕೂಡ ಅರ್ಧದಷ್ಟು ಮುಗಿಯುತ್ತಾ ಬಂದಿದೆ.