ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ತೂಗುದೀಪಗೆ ಸದ್ಯಕ್ಕಿಲ್ಲ ಮನೆ ಊಟ

0
Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್‌ ಜೈಲು ಪಾಲಾಗಿದೆ. ವಿಚಾರಣಾಧೀನ ಕೈದಿ ನಟ ದರ್ಶನ್‌ಗೆ ಮನೆ ಊಟ ಕೊಡುವಂತೆ ಸಲ್ಲಿಕೆ ಮಾಡಿದ್ದ ಅರ್ಜಿ ವಜಾ ಮಾಡಿದೆ. ಹೌದು ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್‌ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿದೆ.

Advertisement

ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿತ್ತು.  ಇಂದು ದರ್ಶನ್‌ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದ್ದು, ದರ್ಶನ್‌ ಪರ ವಕೀಲರು ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ.

 

 


Spread the love

LEAVE A REPLY

Please enter your comment!
Please enter your name here