ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ & ಗ್ಯಾಂಗ್’ಗೆ ಸೆ.9 ರವರೆಗೆ ನ್ಯಾಯಾಂಗ ಬಂಧನ

0
Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನ ಆರೋಪದ ಮೇಲೆ ನಟ ದರ್ಶನ್ ಅಂಡ್​ ಗ್ಯಾಂಗ್ ಜೈಲುವಾಸ ಅನುಭವಿಸುತ್ತಿತ್ತು. ಆದರೆ ಜೈಲು ಸೇರಿರೋ ದರ್ಶನ್​ ರಾಜ್ಯಾತಿಥ್ಯದ ವೈರಲ್‌ ಫೋಟೋಗಳು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ದರ್ಶನ್​ ಬಳ್ಳಾರಿ ಶಿಫ್ಟ್​ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿನ ಸಿಬ್ಬಂದಿ ಮತ್ತು ಪೊಲೀಸರು ಫುಲ್​ ಅಲರ್ಟ್​ ಆಗಿದ್ದಾರೆ.

Advertisement

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್‌ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್‌ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನ  ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ ನ್ಯಾಯಾಧೀಶರು ದರ್ಶನ್‌ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಮತ್ತೆ ಆದೇಶ ಹೊರಡಿಸಿದ್ದಾರೆ. ನ್ಯಾಯಾಂಗ ಬಂಧನ ವಿಸ್ತರಣೆಗೊಂಡ ಬೆನ್ನಲ್ಲೇ ದರ್ಶನ್‌ ಅವರನ್ನು ಇಂದೇ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗುತ್ತದೆ. ಶಿರಾ ತುಮಕೂರು ಮಾರ್ಗವಾಗಿ ಬಳ್ಳಾರಿ ಜೈಲಿಗೆ ದರ್ಶನ್‌ ಅವರನ್ನು ಕರತರಲಾಗುತ್ತದೆ.


Spread the love

LEAVE A REPLY

Please enter your comment!
Please enter your name here