ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ವಿಚಾರಣೆ ಮುಂದುವರಿದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ಇಂದು ನ್ಯಾಯಾಲಯದೆದುರು ಹಾಜರಾಗಿದ್ದರು.
ಇದೀಗ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮತ್ತು ಗ್ಯಾಂಗ್‌ಗೆ ಶಾಕ್ ಕೊಟ್ಟಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದೋಷಾರೋಪಪಟ್ಟಿಯನ್ನು57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.
ಕೆಲವು ದಾಖಲಾತಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಆರೋಪಿಗಳ ವಿರುದ್ಧ ಇರುವ ಕೆಲವೊಂದು ಸಾಕ್ಷ್ಯ, ಕೃತ್ಯಕ್ಕೆ ಬಳಸಿದ ವಾಹನಗಳ ರಿಲೀಸ್ ಪ್ರಕ್ರಿಯೆ ದಾಖಲೆಗಳನ್ನು ಒಳಗೊಂಡ ದೋಷಾರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಇಂದು ನ್ಯಾಯಾಲಯಕ್ಕೆ ಹಾಜರಾದರು. ಪವಿತ್ರಾ ಗೌಡ ಬಿಳಿ ಬಣ್ಣದ ಸೀರೆ ಧರಿಸಿದ್ದರೆ ದರ್ಶನ್ ಕಪ್ಪು ಬಣ್ಣ ಡ್ರೆಸ್ ಧರಿಸಿದ್ದರು.



