ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಎಲ್ಲಾ ಜೈಲು ಹಾಗೂ ಹೈಕೋರ್ಟ್ಗಳಿಗೂ ತನ್ನ ಆದೇಶದ ಪ್ರತಿ ಕಳುಹಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ. ಇದೇ ವೇಳೆ, ದರ್ಶನ್ ಮತ್ತಿತರರು ಆರೋಪ ಎದುರಿಸುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರ ತ್ವರಿತವಾಗಿ ನಡೆಯಬೇಕು ಎಂದು ನ್ಯಾಯಪೀಠ ಸೂಚಿಸಿದೆ.
‘ಕೊಲೆಯ ಗಂಭೀರತೆಯನ್ನು ಪರಿಗಣಿಸಿ, ಟ್ರಯಲ್ ಕೋರ್ಟ್ನಲ್ಲಿ ಸಾಕ್ಷ್ಯಗಳ ವಿಚಾರಣೆಯು ಬಹಳ ತ್ವರಿತವಾಗಿ ನಡೆಯಬೇಕು’ ಎಂದು ನ್ಯಾ. ಪರ್ದಿವಾಲಾ ಮತ್ತು ನ್ಯಾ. ಆರ್ ಮಹದೇವನ್ ಅವರಿರುವ ನ್ಯಾಯಪೀಠವು ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್, ಜಗದೀಶ್ ಅಲಿಯಾಸ್ ಜಗ್ಗ, ಅನುಕುಮಾರ್ ಅಲಿಯಾಸ್ ಅನು, ಪ್ರದೋಷ್, ನಾಗರಾಜು ಅಲಿಯಾಸ್ ನಾಗ, ಲಕ್ಷ್ಮಣ್ ಈ ಏಳು ಮಂದಿಯ ಜಾಮೀನನ್ನು ಹೈಕೋರ್ಟ್ ರದ್ದು ಗೊಳಿಸಿತ್ತು. ಈ ಬಗ್ಗೆ ಸುಪ್ರೀ ಕೋರ್ಟ್ ಮೆಟ್ಟಿಲೇರಿದ್ದು ಇಂದು ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದ್ದು ಹೈಕೋರ್ಟ್ ನೀಡಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ತಪ್ಪು ಯಾರೆ ಮಾಡಿದ್ರು ಶಿಕ್ಷೆ ಕಟ್ಟಿಟ್ಟ ಬುತ್ತಿ ಅನ್ನೋದನ್ನು ಫ್ರೂವ್ ಮಾಡಿದೆ.