ರೇಣುಕಾಸ್ವಾಮಿ ಕೊಲೆ ಕೇಸ್: ‘ನಟ ದರ್ಶನ್’ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

0
Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಗರದ 57ನೇ ಸಿಟಿ ಸಿವಿಲ್ ನ್ಯಾಯಾಲಯ ಇಂದು ವಿಚಾರಣೆ ನಡೆಸಿ ನಟ ದರ್ಶನ್  ಜಾಮೀನು ‌ಅರ್ಜಿ ಸೋಮವಾರಕ್ಕೆ ಮುಂದೂಡಿಕೆ ಆಗಿದೆ.

Advertisement

ಪ್ರಕರಣ ಸಂಬಂಧ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ನಟ ದರ್ಶನ್ ಜಾಮೀನು ಕೋರಿ  57ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಇಂದು ನಟ ದರ್ಶನ್ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ.

ಈ ಮಧ್ಯೆ ವಾದ ಮಂಡನೆಗೆ ಕಾಲಾವಕಾಶ ನೀಡುವಂತೆ ನಟ ದರ್ಶನ್ ಪರ ವಕೀಲ ಸುನೀಲ್ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು. ವಕೀಲ ಸುನೀಲ್ ಮನವಿ ಮೇರೆಗೆ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್ 30‍ಕ್ಕೆ ಮೂಂದೂಡಿಕೆ ಮಾಡಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here