ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್ ಅಂದರ್ ಆಗಿದ್ದಾರೆ. ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಮೊದಲ ಆರೋಪಿ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. 13 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೆ, 4 ಆರೋಪಿಗಳು ತುಮಕೂರು ಜೈಲಿನಲ್ಲಿದ್ದಾರೆ. ದಿನೇ ದಿನೇ ಈ ಪ್ರಕರಣ ಹೊಸ ತಿರುವು ಪಡೆಯುತ್ತಿದೆ. ಇದೀಗ ರೇಣುಕಾಸ್ವಾಮಿ ಹತ್ಯೆ ಕೇಸ್ ಮತ್ತಷ್ಟು ಬಲಿಷ್ಠಗೊಂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಯನ್ನು ಪೊಲೀಸರು ಸಂಗ್ರಹಿಸಿದ್ದಾರೆ. 33ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಯನ್ನು ಪೊಲೀಸರುಸಂಗ್ರಹಿಸಿದ್ದಾರೆ. ಆರೋಪಿಗಳ ಚಲನವಲನ, ಓಡಾಡಿರುವ ಏರಿಯಾಗಳು, ಮೃತದೇಹ ಸಾಗಿಸಿದ ಮಾರ್ಗದ ಸಿಸಿಟಿವಿ ದೃಶ್ಯಾವಳಿ ಸಂಗ್ರಹ ಮಾಡಲಾಗಿದೆ. ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ಪರಿಶೀಲನೆಯನ್ನು ಪೊಲೀಸರು ನಡೆಸಿದ್ದಾರೆ. ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಿಸಿಟಿವಿ ದೃಶ್ಯಾವಳಿಯಾಗಿದೆ. ಪ್ರಕರಣ ಸಂಬಂಧ ಈವರೆಗೆ 33ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯ ಪತ್ತೆಯಾಗಿದೆ.
ರೇಣುಕಾಸ್ವಾಮಿ ಕೊಲೆಗೂ ಮುನ್ನ ಪಾರ್ಟಿ ಮಾಡಿದ್ದ ರೆಸ್ಟೋರೆಂಟ್, ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಿಂದ ಪಟ್ಟಣಗೆರೆ ಶೆಡ್,ರೆಸ್ಟೋರೆಂಟ್ ಹಾಗೂ ಶೆಡ್ ವರೆಗಿನ ಮಾರ್ಗ ಮಧ್ಯದ ಸಿಸಿಟಿವಿ ದೃಶ್ಯ ಸಂಗ್ರಹಿಸಲಾಗಿದೆ. ದರ್ಶನ್ , ಪವಿತ್ರಾಗೌಡ ಮನೆ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿದ್ದು, ಈವರೆಗೆ 33ಕ್ಕೂ ಹೆಚ್ಚು ಸಿಸಿಟಿವಿಗಳ ದೃಶ್ಯಾವಳಿ ಸಂಗ್ರಹ ಮಾಡಲಾಗಿದೆ. ಇದನ್ನು ಎಫ್ಎಸ್ಎಲ್‌ಗೆ ರವಾನೆ ಮಾಡಲಾಗಿದೆ. FSL ಹಾಗೂ ಸಿಐಡಿ ತಾಂತ್ರಿಕ ಘಟಕಕ್ಕೆ ಸಿಸಿಟಿವಿ ದೃಶ್ಯ ರವಾನೆ ಮಾಡಿದ್ದು, ಎರಡು ಕಡೆ ತಾಂತ್ರಿಕವಾಗಿ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಲಿದ್ದಾರೆ.