ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಗೌಡ ರಿಲೀಸ್!

0
Spread the love

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಇದೀಗ ಹೈಕೋರ್ಟ್ ನಿಂದ ಜಾಮೀನು ಪಡೆದಿರುವ ಪವಿತ್ರಾಗೌಡ ಅವರು ಇಂದು ರಿಲೀಸ್ ಆಗಲಿದ್ದಾರೆ.

Advertisement

6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು.

ಇಂದು ಬೆಳಗ್ಗೆ ಬಿಡುಗಡೆಯ ಎಲ್ಲಾ ಪ್ರಕ್ರಿಯೆಗಳು ಮುಗಿಯಲಿದೆ. ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆಯಾದರೆ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್‌ ಆಗಲಿದ್ದಾರೆ.

ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದೆ.


Spread the love

LEAVE A REPLY

Please enter your comment!
Please enter your name here