ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯ ಬರ್ಬರ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಸೇರಿ ಒಟ್ಟು 17 ಆರೋಪಿಗಳು ಸದ್ಯ ಜೈಲುಗಳಲ್ಲಿ ಕಂಬಿ ಎಣಿಸುತ್ತಿದ್ದಾರೆ. . ಈ ಕೇಸ್ನ ತನಿಖೆ ಕೊನೇ ಹಂತಕ್ಕೆ ಬಂದಿದೆ. ಈಗಾಗಲೇ ಪ್ರಕರಣದ ಆಳ-ಅಗಲ ಬಿಡದೇ ಇಂಚಿಂಚೂ ತನಿಖೆ ನಡೆಸಿರುವ ಪೊಲೀಸರು ಕೊನೆಗೂ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಒಂದು ಪ್ರಮುಖ ಬೆಳವಣಿಗೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹಾಗಾಗಿಲ್ಲ. ಇದು ದರ್ಶನ್ ಫ್ಯಾನ್ಸ್ಗೆ ಕೊಂಚ ರಿಲೀಫ್ ನೀಡಿದೆ.
ಈ ಮೊದಲು ಎಫ್ಐಆರ್ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದರು. ಇದನ್ನು ಚಾರ್ಜ್ಶೀಟ್ನಲ್ಲಿ ಬದಲಿಸಬಹುದು ಎಂದು ಊಹಿಸಲಾಗಿತ್ತು. ದರ್ಶನ್ ಎ1 ಹಗೂ ಪವಿತ್ರಾ ಎ2 ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಎಸಿಪಿ ಚಂದನ್ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು ಎರಡನೇ ಆರೋಪಿ ಆಗಿ ಉಲ್ಲೇಖ ಮಾಡಿದೆ.
17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. 3 ಪ್ರತ್ಯಕ್ಷ ಸಾಕ್ಷಿಗಳು ಇವೆ. ಎಫ್ಎಸ್ಎಲ್ ಮಾತ್ತು ಸಿಎಫ್ಎಸ್ಎಲ್ನಿಂದ 8 ವರದಿಗಳು ಇವೆ. ಈ ಪ್ರಕರಣದಲ್ಲಿ ಒಟ್ಟೂ 231 ಸಾಕ್ಷಿಗಳು ಇವೆ. ಕೊಲೆ ಕೇಸ್ನಲ್ಲಿ ಇನ್ನೂ ತನಿಖೆ ಪೂರ್ಣಗೊಂಡಿಲ್ಲ. ಹೀಗಾಗಿ, ಹೀಗಾಗಿ ಸಿಆರ್ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.