ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ ಸಾಕ್ಷಿ ಅರ್ಜಿಯ ಆದೇಶವನ್ನು 59ನೇ ಸೆಷನ್ಸ್ ಕೋರ್ಟ್ ಆಗಸ್ಟ್ 24ಕ್ಕೆ ಮುಂದೂಡಿದೆ.
ಪ್ರದೋಷ್ ಅಪರಾಧಿಕ ಹಿನ್ನೆಲೆ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸರು ಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ. ಪ್ರದೋಷ್ ಮೇಲೆ ಈ ಕೇಸ್ ಬಿಟ್ಟು ಬೇರೆ ಯಾವ ಕೇಸ್ ಇಲ್ಲ ಎಂದು ಎಸಿಪಿ ವರದಿಯಲ್ಲಿ ತಿಳಿಸಿದ್ದಾರೆ. ಜೈಲಿನಲ್ಲಿರುವ ವೇಳೆ ಪ್ರದೋಷ್ ನಡವಳಿಕೆಯ ಬಗ್ಗೆಯೂ ವರದಿ ನೀಡುವಂತೆ ಕೋರ್ಟ್ ಸೂಚಿಸಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗ್ಯಾಂಗ್ ಆರೋಪಿ ಪ್ರದೋಷ್, ಮಾಫಿ ಸಾಕ್ಷಿಯಾಗಿ ತನ್ನನ್ನು ಪರಿಗಣಿಸುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ಈ ಮಾಫಿ ಸಾಕ್ಷಿ ವಿಚಾರ ತೀವ್ರ ಕುತೂಹಲ ಮೂಡಿಸಿದೆ. ಇದೇ ವೇಳೆ, ಮತ್ತೊಬ್ಬ ಆರೋಪಿ ವಿನಯ್ ಕೂಡ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದಾನೆ.



