ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್, ಪವಿತ್ರಗೌಡಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಸುಪ್ರೀಂ!

0
Spread the love

ರೇಣುಕಾಸ್ವಾಮಿ ಪ್ರಕರಣದ ಎಲ್ಲಾ ಆರೋಪಿಗಳು ಸದ್ಯ ಜಾಮೀನಿನ ಮೇಲೆ ಆಚೆ ಇದ್ದಾರೆ. ಈಗ ಹೈಕೋರ್ಟ್​ ನೀಡಿರುವ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಕೆಯಾಗಿತ್ತು. ಇದೀಗ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ದರ್ಶನ್​ಗೆ ತಾತ್ಕಾಲಿಕ ರಿಲೀಫ್ ನೀಡಿದೆ.

Advertisement

ರೇಣುಕಾಸ್ವಾಮಿ ಬರ್ಬರ ಹತ್ಯೆ ಕೇಸ್​ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಬಂಧನಕ್ಕೆ ಒಳಗಾಗಿತ್ತು. ಆರು ತಿಂಗಳ ಕಾಲ ಇವರು ಜೈಲಿನಲ್ಲಿ ಇದ್ದರು. 2014ರಲ್ಲಿ ಪ್ರಕರಣದ ಎಲ್ಲಾ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.

ಆದರೆ, ಪ್ರಕರಣದ ಪ್ರಮುಖ ಏಳು ಆರೋಪಿಗಳಿಗೆ ಜಾಮೀನು ನೀಡಿದ್ದನ್ನು ಬೆಂಗಳೂರು ಪೊಲೀಸರು ಪ್ರಶ್ನೆ ಮಾಡಿದ್ದರು. ಸದ್ಯ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದೆ.

ಸದ್ಯ ಸುಪ್ರೀಂಕೋರ್ಟ್​ಗೆ ಬೇಸಿಗೆ ರಜೆ ಇದೆ. ಜುಲೈ 14ಕ್ಕೆ ಬೇಸಿಗೆ ರಜೆ ಅಂತ್ಯವಾಗಲಿದೆ. ಇದಾದ ಬಳಿಕ ವಿಚಾರಣೆ ನಡೆಸೋದಾಗಿ ಸುಪ್ರೀಂಕೋರ್ಟ್​ ಹೇಳಿದೆ. ಅಲ್ಲಿಯವರೆಗೆ ದರ್ಶನ್ ಹಾಗೂ ಇತರರು ಯಾವುದೇ ಚಿಂತೆ ಇಲ್ಲದೆ ಹೊರಗೆ ಓಡಾಡಿಕೊಂಡು ಇರಬಹುದಾಗಿದೆ. ವಿಚಾರಣೆ ದಿನಾಂಕ ಮುಂದಿನ ದಿನಗಳಲ್ಲಿ ಪ್ರಕಟ ಆಗಲಿದೆ.


Spread the love

LEAVE A REPLY

Please enter your comment!
Please enter your name here